ಬಲೂಚಿಸ್ಥಾನದ ವಿಧಾನಸಭೆಯಲ್ಲಿ ಪ್ರಧಾನಿ ಮೋದಿ ವಿರುದ್ಧ ನಿರ್ಣಯ

ಬಲೂಚಿಸ್ಥಾನ ವಿಧಾನಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ನಿರ್ಣಯ ಅಂಗೀಕರಿಸಲಾಗಿದೆ.
ನರೇಂದ್ರ ಮೋದಿ
ನರೇಂದ್ರ ಮೋದಿ

ಇಸ್ಲಾಮಾಬಾದ್: ಬಲೂಚಿಸ್ಥಾನ ವಿಧಾನಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ನಿರ್ಣಯ ಅಂಗೀಕರಿಸಲಾಗಿದೆ.

ಭಾರತದ 69 ನೇ ಸ್ವಾತಂತ್ರ್ಯ ದಿನಾಚರಣೆ ಭಾಷಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಬಲೂಚಿಸ್ಥಾನದ ಸ್ವಾತಂತ್ರ್ಯದ ಬಗ್ಗೆ ಉಲ್ಲೇಖಿಸಿದ್ದರ ಹಿನ್ನೆಲೆಯಲ್ಲಿ ಬಲೂಚಿಸ್ಥಾನದ ವಿಧಾನಸಭೆಯಲ್ಲಿ ಪ್ರಧಾನಿ ಮೋದಿ ವಿರುದ್ಧ ನಿರ್ಣಯ ಅಂಗೀಕರಿಸಲಾಗಿದೆ ಎಂದು ಡಾನ್ ಪತ್ರಿಕೆ ವರದಿ ಮಾಡಿದೆ.

ಪಾಕಿಸ್ತಾನ್ ಮುಸ್ಲಿಂ ಲೀಗ್ ನವಾಜ್(ಪಿಎಂಎಲ್-ಎನ್) ಪಕ್ಷದ ಶಾಸಕ ಮುಹಮ್ಮದ್ ಖಾನ್ ಲೆಹ್ರಿ ವಿಧಾನಸಭೆಯಲ್ಲಿ ನಿರ್ಣಯ ಮಂಡಿಸಿದ್ದು, ನಿರ್ಣಯಕ್ಕೆ ಎಲ್ಲಾ ರಾಜಕೀಯ ಪಕ್ಷಗಳು ಬೆಂಬಲ ಸೂಚಿಸಿವೆ ಎಂದು ಡಾನ್ ವರದಿಯಲ್ಲಿ ತಿಳಿಸಿದೆ.

ಪ್ರಧಾನಿ ನರೇಂದ್ರ ಮೋದಿ ವಿರುದ್ಧದ ಖಂಡನಾ ನಿರ್ಣಯಕ್ಕೆ ಬಲೂಚಿಸ್ಥಾನದ ಸಿಎಂ ನವಾಬ್ ಸನಾವುಲ್ಲಾ ಝೆಹ್ರಿ ಸಹಿ ಹಾಕಿದ್ದಾರೆ. ಬಲೂಚಿಸ್ಥಾನದ ಸ್ವಾತಂತ್ರ್ಯದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಮಾತನಾಡಿರುವುದು ಬಲೂಚಿಸ್ಥಾನದ ಪ್ರದೇಶದಲ್ಲಿ ನಡೆಯುತ್ತಿರಿಯುವ ಭಯೋತ್ಪಾದನೆಗೆ ಭಾರತದಿಂದ ನಡೆಯುತ್ತಿದೆ ಎಂಬುದನ್ನು ಸ್ಪಷ್ಟವಾಗಿ ಸೂಚಿಸುತ್ತದೆ ಎಂದು ನಿರ್ಣಯದಲ್ಲಿ ತಿಳಿಸಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com