ಅಮೆರಿಕದ ನಿಯೋಜಿತ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟೈಮ್ ವರ್ಷದ ವ್ಯಕ್ತಿ

ಅಮೆರಿಕದ ನಿಯೋಜಿತ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು "ಟೈಮ್‌' ನಿಯತಕಾಲಿಕೆಯ "ವರ್ಷದ ವ್ಯಕ್ತಿ ಗೌರವ'ಕ್ಕೆ ಪಾತ್ರವಾಗಿದ್ದಾರೆ.
ಡೊನಾಲ್ಡ್ ಟ್ರಂಪ್
ಡೊನಾಲ್ಡ್ ಟ್ರಂಪ್
ವಾಷಿಂಗ್ಟನ್: ಅಮೆರಿಕದ ನಿಯೋಜಿತ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು "ಟೈಮ್‌' ನಿಯತಕಾಲಿಕೆಯ "ವರ್ಷದ ವ್ಯಕ್ತಿ ಗೌರವ'ಕ್ಕೆ ಪಾತ್ರವಾಗಿದ್ದಾರೆ.
ಅಮೆರಿಕದ ಪ್ರಭಾವಿ ಯತಕಾಲಿಕೆ ಟೈಮ್, ಡೊನಾಲ್ಡ್ ಟ್ರಂಪ್ ಅವರನ್ನು 2016ನೇ ಸಾಲಿನ ವರ್ಷದ ವ್ಯಕ್ತಿ ಎಂದು ಆಯ್ಕೆ ಮಾಡಿದ್ದು, ಈ ಬಗ್ಗೆ ಎನ್ ಬಿಸಿಗೆ ಪ್ರತಿಕ್ರಿಯಿಸಿದ ಅಮೆರಿಕದ ನಿಯೋಜಿತ ಅಧ್ಯಕ್ಷ, ಇದೊಂದು ದೊಡ್ಡ ಗೌರವ ಎಂದು ದೂರವಾಣಿ ಮೂಲಕ ತಿಳಿಸಿದ್ದಾರೆ.
ಟೈಮ್ ನಿಯತಕಾಲಿಕೆ ನಡೆಸಿದ ಸಮೀಕ್ಷೆಯಲ್ಲಿ ಡೊನಾಲ್ಡ್ ಟ್ರಂಪ್ ಮೊದಲ ಸ್ಥಾನ ಪಡೆದು ಅಮೆರಿಕದ ಮಾಜಿ ಕಾರ್ಯದರ್ಶಿ ಹಿಲರಿ ಕ್ಲಿಂಟನ್ ಅವರು ಎರಡನೇ ಸ್ಥಾನ ಪಡೆದಿದ್ದಾರೆ ಎಂದು ಟೈಮ್ ವ್ಯವಸ್ಥಾಪಕ ಸಂಪಾದಕ ನ್ಯಾನ್ಸಿ ಗಿಬ್ಸ್ ಅವರು ತಿಳಿಸಿದ್ದಾರೆ.
ಕಳೆದ ವಾರವಷ್ಟೇ ಪ್ರಧಾನಿ ನರೇಂದ್ರ ಮೋದಿ ಅವರು 2016ರ ಟೈಮ್ ವರ್ಷದ ವ್ಯಕ್ತಿಗಾಗಿ ನಡೆದ ಆನ್ ಲೈನ್ ಓದುಗರ ಸಮೀಕ್ಷೆಯಲ್ಲಿ ಅಮೆರಿಕದ ಹಾಲಿ ಅಧ್ಯಕ್ಷ ಬರಾಕ್‌ ಒಬಾಮಾ, ನಿಯೋಜಿತ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌, ರಷ್ಯಾ ಅಧ್ಯಕ್ಷ ವ್ಲಾದಿಮಿರ್‌ ಪುಟಿನ್‌ ಅವರನ್ನು ಹಿಂದಿಕ್ಕಿ ಗೆಲುವು ಸಾಧಿಸಿದ್ದರು.
ಒಂದು ವರ್ಷದ ಅವಧಿಯಲ್ಲಿ ಒಳ್ಳೆಯ ಅಥವಾ ಕೆಟ್ಟ ಕಾರಣಗಳಿಂದ ಸುದ್ದಿ ಹಾಗೂ ಪ್ರಪಂಚದ ಮೇಲೆ ಅತಿ ಹೆಚ್ಚು ಪ್ರಭಾವ ಬೀರಿದ ವ್ಯಕ್ತಿಗಳನ್ನು ಟೈಮ್‌ ನಿಯತಕಾಲಿಕೆ ವರ್ಷದ ವ್ಯಕ್ತಿ ಗೌರವಕ್ಕೆ ಆಯ್ಕೆ ಮಾಡುತ್ತದೆ. ಪತ್ರಿಕೆಯ ಸಂಪಾದಕರೇ ಈ ಕುರಿತು ಅಂತಿಮ ನಿರ್ಧಾರ ತೆಗೆದುಕೊಳ್ಳುತ್ತಾರಾದರೂ, ಓದುಗರಿಂದಲೂ ಅಭಿಪ್ರಾಯವನ್ನು ಕೇಳಲಾಗುತ್ತದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com