ಪಾಕಿಸ್ತಾನ ಅಮೆರಿಕಾದೊಂದಿಗೆ ನಿಕಟವಾಗಿ ಕಾರ್ಯನಿರ್ವಹಿಸಲು ಬಯಸುತ್ತಿದೆ: ಪಾಕ್ ಪ್ರತಿನಿಧಿ

ಪ್ರಾದೇಶಿಕ ಭದ್ರತೆ, ಕಾಶ್ಮೀರ ವಿವಾದ ಸೇರಿದಂತೆ ಹಲವು ವಿಷಯಗಳ ಬಗ್ಗೆ ಅಮೆರಿಕಾದೊಂದಿಗೆ ನಿಕಟವಾಗಿ ಕಾರ್ಯನಿರ್ವಹಿಸುವುದನ್ನು ಪಾಕಿಸ್ತಾನ ಎದುರು ನೋಡುತ್ತಿದೆ
ತಾರಿಕ್ ಫತೇಮಿ
ತಾರಿಕ್ ಫತೇಮಿ
ವಾಷಿಂಗ್ ಟನ್: ಪ್ರಾದೇಶಿಕ ಭದ್ರತೆ, ಕಾಶ್ಮೀರ ವಿವಾದ ಸೇರಿದಂತೆ ಹಲವು ವಿಷಯಗಳ ಬಗ್ಗೆ ಅಮೆರಿಕಾದೊಂದಿಗೆ ನಿಕಟವಾಗಿ ಕಾರ್ಯನಿರ್ವಹಿಸುವುದನ್ನು ಪಾಕಿಸ್ತಾನ ಎದುರು ನೋಡುತ್ತಿದೆ ಎಂದು ಪಾಕ್ ಪ್ರಧಾನಿಯ ವಿದೇಶಾಂಗ ವ್ಯವಹಾರಗಳ ವಿಶೇಷ ಸಹಾಯಕ ಅಧಿಕಾರಿ ತಾರಿಕ್ ಫತೇಮಿ ತಿಳಿಸಿದ್ದಾರೆ. 
ವಾಷಿಂಗ್ ಟನ್ ನಲ್ಲಿ ಪ್ರಸ್ತುತ ಆಡಳಿತದಲ್ಲಿರುವ ಅಧಿಕಾರಿಗಳು ಹಾಗೂ ಟ್ರಂಪ್ ಆಡಳಿತದಲ್ಲಿ ಕಾರ್ಯನಿರ್ವಹಿಸುವ ಸಾಧ್ಯತೆ ಇರುವ ಅಧಿಕಾರಿಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ನಿಟ್ಟಿನಲ್ಲಿ ಮಾತನಾಡಿರುವ ನಡೆಸಿರುವ ಪಾಕ್ ಪ್ರತಿನಿಧಿ, ಪಾಕಿಸ್ತಾನ ಅಮೆರಿಕಾದೊಂದಿಗೆ ನಿಕಟವಾಗಿ ಕಾರ್ಯನಿರ್ವಹಿಸುವುದನ್ನು ಎದುರು ನೋಡುತ್ತಿದೆ ಎಂದು ತಿಳಿಸಿದ್ದಾರೆ. 
ಎನ್ ಬಿಸಿಗೆ ಸಂದರ್ಶನ ನೀಡಿದ್ದ ಅಮೆರಿಕಾದ ಉಪಾಧ್ಯಕ್ಷ ಮೈಕ್ ಪೆನ್ಸ್, ಪ್ರಾದೇಶಿಕ ಶಾಂತಿಗಾಗಿ ಡೊನಾಲ್ಡ್ ಟ್ರಂಪ್ ಪಾಕಿಸ್ತಾನ ಹಾಗೂ ಭಾರತದೊಂದಿಗೆ ಸಂಪೂರ್ಣವಾಗಿ ತೊಡಗಿಸಿಕೊಳ್ಳುವ ಉದ್ದೇಶ ಹೊಂದಿದ್ದಾರೆ ಎಂದು ಹೇಳಿದ್ದರು. ಅಷ್ಟೇ ಅಲ್ಲದೇ ಡೊನಾಲ್ಡ್ ಟ್ರಂಪ್ ಪಾಕಿಸ್ತಾನ- ಭಾರತ ನಡುವಿನ ವಿವಾದಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ಮಹತ್ವದ ಪಾತ್ರ ವಹಿಸುವ ಸಾಧ್ಯತೆ ಇದೆ ಎಂದು ಹೇಳಿದ್ದರು. ಅಮೆರಿಕ ಪ್ರೆಸ್ ನೊಂದಿಗೆ ಮಾತನಾಡಿರುವ ಪಾಕಿಸ್ತಾನದ ಪ್ರತಿನಿಧಿ ಫತೇಮಿ, ಪಾಕಿಸ್ತಾನ ಅಮೆರಿಕಾದೊಂದಿಗಿನ ದ್ವಿಪಕ್ಷೀಯ ಸಂಬಂಧವನ್ನು ವೃದ್ಧಿಗೊಳಿಸಲು ಬಯಸುತ್ತಿದೆ ಎಂದು ಹೇಳಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com