ಬ್ರಿಟನ್ ನಲ್ಲಿ 6 ಮಂದಿ ಶಂಕಿತ ಉಗ್ರರ ಬಂಧನ

ಪ್ರಮುಖ ಬೆಳವಣಿಗೆಯೊಂದರಲ್ಲಿ ಬ್ರಿಟನ್ ನಾದ್ಯಂತ ದಾಳಿ ನಡೆಸಿದ ಅಧಿಕಾರಿಗಳು ವಿವಿಧ ಪ್ರದೇಶಗಳಲ್ಲಿ ಒಟ್ಟು 6 ಮಂದಿ ಶಂಕಿತ ಉಗ್ರರನ್ನು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಲಂಡನ್: ಪ್ರಮುಖ ಬೆಳವಣಿಗೆಯೊಂದರಲ್ಲಿ ಬ್ರಿಟನ್ ನಾದ್ಯಂತ ದಾಳಿ ನಡೆಸಿದ ಅಧಿಕಾರಿಗಳು ವಿವಿಧ ಪ್ರದೇಶಗಳಲ್ಲಿ ಒಟ್ಟು 6 ಮಂದಿ ಶಂಕಿತ ಉಗ್ರರನ್ನು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.

ಡರ್ಬಿಯಲ್ಲಿ ನಾಲ್ಕು ಮಂದಿ, ಬರ್ಟನ್ ನಲ್ಲಿ ಓರ್ವ ಮತ್ತು ಲಂಡನ್ ನಲ್ಲಿ ಓರ್ವ ಮಹಿಳೆ ಸೇರಿದಂತೆ ಒಟ್ಟು ಆರು ಮಂದಿ ಶಂಕಿತ ಉಗ್ರರನ್ನು ಬಂಧಿಸಲಾಗಿದೆ. ಕಳೆದ ಸುಮಾರು ತಿಂಗಳುಗಳಿಂದ ಈ ಆರು ಮಂದಿಯ  ಚಲನವಲನಗಳ ಮೇಲೆ ನಿಗಾ ಇರಿಸಿದ್ದ ಭದ್ರತಾ ಅಧಿಕಾರಿಗಳು ನಿನ್ನೆ ಇವರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಭದ್ರತಾ ಅಧಿಕಾರಿಗಳು ಹಾಗೂ ಗುಪ್ತಚರ ಇಲಾಖೆಗಳು ನೀಡಿರುವ ಮಾಹಿತಿಗಳ ಪ್ರಕಾರ ಈ ಆರು ಮಂದಿ  ಶಂಕಿತ ಉಗ್ರರು ಒಂದೇ ಉಗ್ರ ಸಂಘಟನೆ ಪರವಾಗಿ ಕಾರ್ಯ ನಿರ್ವಹಿಸುತ್ತಿದ್ದರು ಎಂದು ಶಂಕೆ ವ್ಯಕ್ತಪಡಿಸಿವೆ.

ಅಂತೆಯೇ ಈ ಆರು ಮಂದಿ ವಾಸಿಸುತ್ತಿದ್ದ ಪ್ರದೇಶಗಳಿಗೆ ಬಾಂಬ್ ನಿಷ್ಕ್ರಿಯ ದಳದ ಸಿಬ್ಬಂದಿಗಳು ಹಾಗೂ ವಿಧಿ ವಿಜ್ಞಾನ ಪ್ರಯೋಗಾಲಯದ ಸಿಬ್ಬಂದಿಗಳು ತೆರಳಿ ಶೋಧ ನಡೆಸಿದ್ದಾರೆ. ಈ ಶೋಧದ ಕುರಿತ ಮಾಹಿತಿಗಳು ಇನ್ನೂ  ಲಭ್ಯವಾಗಿಲ್ಲ.

ಬ್ರಿಟನ್ ನ ಭಯೋತ್ಪಾದನಾ ನಿಗ್ರಹ ಕಾಯ್ದೆಯ ಪ್ರಕಾರ ಪ್ರಸ್ತುತ ಭದ್ರತಾ ಅಧಿಕಾರಿಗಳು ವಶಕ್ಕೆ ಪಡೆದಿರುವ ಈ ಆರು ಮಂದಿಯ ವಿರುದ್ಧ 48 ಗಂಟೆಗಳಲ್ಲಿ ಚಾರರ್ಜ್ ಶೀಟ್ ದಾಖಲಿಸಬೇಕು. ಇಲ್ಲವೇ ವಾರಂಟ್ ಜಾರಿ ಮಾಡಿ  ಷರತ್ತು ಬದ್ಧ ಜಾಮೀನಿನ ಮೇಲೆ ಬಿಡುಗಡೆ ಮಾಡಬೇಕು. ಹೀಗಾಗಿ ಈ ಎಲ್ಲ ಆರು ಮಂದಿ ಶಂಕಿತ ಉಗ್ರರ ವಿರುದ್ಧ ಬ್ರಿಟನ್ ಪೊಲೀಸರು ಕೈಗೊಳ್ಳವ ಕ್ರಮದ ಕುರಿತು ಇದೀಗ ಕುತೂಹಲ ಮೂಡಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com