ರಷ್ಯಾ ವಿರುದ್ಧ ಕ್ರಮ ಕೈಗೊಳ್ಳಲಿದ್ದೇವೆ: ಬರಾಕ್ ಒಬಾಮ

ಅಮೆರಿಕಾ ಅಧ್ಯಕ್ಷೀಯ ಚುನಾವಣೆಯಲ್ಲಿ ಹಸ್ತಕ್ಷೇಪ ಮಾಡಿರುವ ರಷ್ಯಾ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಅಮೆರಿಕ ಅಧ್ಯಕ್ಷ ಬರಾಕ್ ಒಬಾಮ ಹೇಳಿದ್ದಾರೆ.
ಬರಾಕ್ ಒಬಾಮ
ಬರಾಕ್ ಒಬಾಮ
ವಾಷಿಂಗ್ ಟನ್: ಅಮೆರಿಕಾ ಅಧ್ಯಕ್ಷೀಯ ಚುನಾವಣೆಯಲ್ಲಿ ಹಸ್ತಕ್ಷೇಪ ಮಾಡಿರುವ ರಷ್ಯಾ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಅಮೆರಿಕ ಅಧ್ಯಕ್ಷ ಬರಾಕ್ ಒಬಾಮ ಹೇಳಿದ್ದಾರೆ. 
ನ.8 ರಂದು ನಡೆದಿದ್ದ ಅಧ್ಯಕ್ಷೀಯ ಚುನಾವಣೆಗೂ ಮುನ್ನ ಡೆಮಾಕ್ರೆಟಿಕ್ ಪಕ್ಷದ ಅಭ್ಯರ್ಥಿ ಹಿಲರಿ ಕ್ಲಿಂಟನ್ ವಿರುದ್ಧ ರಷ್ಯಾ ಸೈಬರ್ ಕಾರ್ಯಾಚರಣೆ ನಡೆಸಿದ್ದ ಆರೋಪ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ರಷ್ಯಾ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಬರಾಕ್ ಒಬಾಮ ಹೇಳಿದ್ದಾರೆ. 
ನಮ್ಮ ದೇಶದ ಚುನಾವಣೆಯ ಸಮಗ್ರತೆಯ ವಿರುದ್ಧ ಯಾವುದೇ ವಿದೇಶಿ ಸರ್ಕಾರ ಕಾರ್ಯನಿರ್ವಹಿಸಿದರೂ ಕ್ರಮ ಕೈಗೊಳ್ಳಲೇಬೇಕು ಎಂದು ಸಂದರ್ಶನವೊಂದರಲ್ಲಿ ಬರಾಕ್ ಒಬಾಮ ಹೇಳಿದ್ದಾರೆ. ರಷ್ಯಾ ವಿರುದ್ಧ ನಮ್ಮ ಆಯ್ಕೆಯ ಸಮಯ, ಪ್ರದೇಶದಲ್ಲಿ ಕ್ರಮ ಕೈಗೊಳ್ಳುವುದು ನಿಶ್ಚಿತ ಎಂದು ಬರಾಕ್ ಒಬಾಮ ಸ್ಪಷ್ಟಪಡಿಸಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com