ಅಮೆರಿಕ ಚುನಾವಣೆ ಹ್ಯಾಕ್ ಮಾಡುವುದನ್ನು ನಿಲ್ಲಿಸುವಂತೆ ಪುಟಿನ್ ಗೆ ಸೂಚಿಸಿದ್ದೆ: ಒಬಾಮಾ

ಅಮೆರಿಕ ಅಧ್ಯಕ್ಷೀಯ ಚುನಾವಣೆಯನ್ನು ಹ್ಯಾಕ್ ಮಾಡುತ್ತಿರುವ ವಿಚಾರ ತಮ್ಮ ಗಮನಕ್ಕೆ ಬಂದಿತ್ತು ಎಂದು ನಿರ್ಗಮಿತ ಅಮೆರಿಕ...
ಬರಾಕ್ ಒಬಾಮಾ
ಬರಾಕ್ ಒಬಾಮಾ
ವಾಷಿಂಗ್ಟನ್: ಅಮೆರಿಕ ಅಧ್ಯಕ್ಷೀಯ ಚುನಾವಣೆಯನ್ನು ಹ್ಯಾಕ್ ಮಾಡುತ್ತಿರುವ ವಿಚಾರ ತಮ್ಮ ಗಮನಕ್ಕೆ ಬಂದಿತ್ತು ಎಂದು ನಿರ್ಗಮಿತ ಅಮೆರಿಕ ಅಧ್ಯಕ್ಷ ಬರಾಕ್ ಒಬಾಮಾ ಅವರು ಶುಕ್ರವಾರ ಹೇಳಿದ್ದಾರೆ. ಅಲ್ಲದೆ ಅಮೆರಿಕ ಚುನಾವಣೆ ಹ್ಯಾಕ್ ಮಾಡುವುದನ್ನು ನಿಲ್ಲಿಸುವಂತೆ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರಿಗೆ ಹೇಳಿದ್ದೆ ಎಂದು ತಿಳಿಸಿದ್ದಾರೆ.
ನಮ್ಮ ದೇಶದ ಚುನಾವಣಾ ಸಮಗ್ರತೆ ಮೇಲೆ ವಿದೇಶಿ ಸರ್ಕಾರ ಪ್ರಭಾವ ಬೀರಲು ಯತ್ನಿಸಿರುವುದರಲ್ಲಿ ಯಾವುದೇ ಅನುಮಾನ ಇಲ್ಲ. ರಷ್ಯಾ ಅಧ್ಯಕ್ಷ ಪುಟಿನ್ ಅವರ ಜತೆ ಹ್ಯಾಕಿಂಗ್ ವಿಷಯವನ್ನು ನೇರವಾಗಿಯೇ ಪ್ರಸ್ತಾಪಿಸಿರುವುದಾಗಿ ಒಬಾಮಾ ಹೇಳಿರುವುದಾಗಿ ಸಿಎನ್ಎನ್ ವರಿದ ಮಾಡಿದೆ.
ವರ್ಷಾಂತ್ಯ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬರಾಕ್ ಒಬಾಮಾ, ರಷ್ಯಾದ ನಾನಾ ರೀತಿಯ ಹ್ಯಾಂಕಿಂಗ್ ಬಗ್ಗೆ ತನಿಖೆ ನಡೆಸುವಂತೆ ಗುಪ್ತಚರ ಸಂಸ್ಥೆಗಳಿಗೆ ಆದೇಶಿಸಲಾಗಿದ್ದು, ಅಂತಿಮ ವರದಿಗಾಗಿ ಕಾಯುತ್ತಿರುವುದಾಗಿ ತಿಳಿಸಿದ್ದಾರೆ.
ರಷ್ಯಾದಲ್ಲಿ ಉನ್ನತ ಅಧಿಕಾರ ಹೊಂದಿರುವವರು ಸೈಬರ್ ಚಟುವಟಿಕೆಯಲ್ಲಿ ನೇರವಾಗಿ ಭಾಗಿಯಾಗಿದ್ದಾರೆ ಎಂದು ಅವರು ಆರೋಪಿಸಿರುವ ಒಬಾಮಾ, ಅಮೆರಿಕ ಚುನಾವಣೆಯಲ್ಲಿ ಹಸ್ತಕ್ಷೇಪ ಮಾಡಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದ್ದರು.
ಕಳೆದ ತಿಂಗಳು ಮುಕ್ತಾಯಗೊಂಡ ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ರಷ್ಯಾ ಹಸ್ತಕ್ಷೇಪ ಮಾಡಿದೆ ಎಂಬ ಆರೋಪ ಈಗಾಗಲೇ ಕೇಳಿಬಂದಿದ್ದು, ಪರಾಜಯಗೊಂಡ ಡೆಮಾಕ್ರೆಟಿಕ್ ಪಕ್ಷದ ಅಭ್ಯರ್ಥಿ ಹಿಲರಿ ಕ್ಲಿಂಟನ್ ಸಹ ಆರೋಪಗಳಿಗೆ ಪೂರಕವಾಗಿ ಹೇಳಿಕೆ ನೀಡಿದ್ದಾರೆ. 
ಅಧ್ಯಕ್ಷೀಯ ಚುನಾವಣೆಯಲ್ಲಿ ಸೋಲುವುದಕ್ಕೆ ನನ್ನ ವಿರುದ್ಧ ರಷ್ಯಾ ನಡೆಸಿದ ಸೈಬರ್ ದಾಳಿ(ಇ-ಮೇಲ್ ಹ್ಯಾಕ್) ಕಾರಣ ಎಂದು ಹಿಲರಿ ಕ್ಲಿಂಟನ್ ಗಂಭೀರ ಆರೋಪ ಮಾಡಿದ್ದಾರೆ. ನ್ಯೂಯಾರ್ಕ್ ಟೈಮ್ಸ್ ಬಿಡುಗಡೆ ಮಾಡಿರುವ ಆಡಿಯೋ ಒಂದರಲ್ಲಿ ಹಿಲರಿ ಕ್ಲಿಂಟನ್, "ನನ್ನ ವಿರುದ್ಧ ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಗೆ ಇರುವ ವೈಯಕ್ತಿಕ ದ್ವೇಷವೇ ಕಾರಣ ಎಂದು ಹಿಲರಿ ಕ್ಲಿಂಟನ್ ಆರೋಪ ಮಾಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com