ಇಂಡೋನೇಷ್ಯಾದಲ್ಲಿ ಪ್ರಬಲ ಭೂಕಂಪನ!

ದ್ವೀಪ ರಾಷ್ಟ್ರ ಇಂಡೋನೇಷ್ಯಾದಲ್ಲಿ ಮತ್ತೆ ಪ್ರಬಲ ಭೂಕಂಪನ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 6.6ರಷ್ಟು ತೀವ್ರತೆ ದಾಖಲಾಗಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಜಕಾರ್ತಾ: ದ್ವೀಪ ರಾಷ್ಟ್ರ ಇಂಡೋನೇಷ್ಯಾದಲ್ಲಿ ಮತ್ತೆ ಪ್ರಬಲ ಭೂಕಂಪನ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 6.6ರಷ್ಟು ತೀವ್ರತೆ ದಾಖಲಾಗಿದೆ.

ಇಂಡೋನೇಷ್ಯಾದ ಈಶಾನ್ಯ ಮಲಕು ಪ್ರದೇಶದಲ್ಲಿ ಭೂಮಿಯ 184 ಕಿ.ಮೀ ಆಳದಲ್ಲಿ ಭೂಕಂಪನದ ಕೇಂದ್ರ ಬಿಂದು ದಾಖಲಾಗಿದೆ ಎಂದು ಇಂಡೋನೇಷ್ಯಾ ಹವಾಮಾನ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. ಆದರೆ ಈ ವರೆಗೂ ಹವಾಮಾನ ಇಲಾಖೆ ಸುನಾಮಿ ಎಚ್ಚರಿಕೆ ನೀಡಿಲ್ಲ. ಈ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ಹವಾಮಾನ ಇಲಾಖೆ ಅಧಿಕಾರಿಗಳು, ಪ್ರಸ್ತುತ ಸಂಭವಿಸಿರುವುದು ಪ್ರಬಲ ಭೂಕಂನವಾದರೂ ಸುನಾಮಿ ಸೃಷ್ಟಿಸುವಷ್ಟು ಪ್ರಬಲವಾಗಿಲ್ಲ ಎಂದು ಹೇಳಿದ್ದಾರೆ.

ಅಂತೆಯೇ ಯಾವುದೇ ಕಟ್ಟಡಕ್ಕೆ ಹಾನಿಯಾದ ಕುರಿತು ಅಥವಾ ಜನರಿಗೆ ಗಾಯಗಳಾದ ಕುರಿತು ವರದಿಯಾಗಿಲ್ಲ ಎಂದು ಸರ್ಕಾರಿ ಮೂಲಗಳು ತಿಳಿಸಿವೆ. ಇಂಡೋನೇಷ್ಯಾದಲ್ಲಿ ಭೂಕಂಪನ ಪ್ರದೇಶಗಳಿದ್ದು, ಇವುಗಳನ್ನು ದಿ ಫೆಸಿಫಿಕ್ ರಿಂಗ್ ಆಫ್ ಫೈರ್ ಎಂದು ಕರೆಯುತ್ತಾರೆ. ಹೀಗಾಗಿ ಈ ಪ್ರದೇಶದಲ್ಲಿ ಭೂಕಂಪನ ಸರ್ವೇ ಸಾಮಾನ್ಯ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com