ಯುಎನ್ ನಿರ್ಣಯ: ಯುಎನ್ಎಸ್ ಸಿ ಸದಸ್ಯರಿಗೆ ಇಸ್ರೇಲ್ ಪ್ರಧಾನಿ ಸಮನ್ಸ್

ಇಸ್ರೇಲ್ ವಿರುದ್ಧದ ನಿರ್ಣಯ ಅಂಗೀಕಾರವಾಗಿರುವ ಹಿನ್ನೆಲೆಯಲ್ಲಿ ಪ್ರಧಾನಿ ಬೆಂಜಮಿನ್ ನೇತನ್ಯಾಹು ಭದ್ರತಾ ಮಂಡಳಿಯ ಸದಸ್ಯ ರಾಷ್ಟ್ರಗಳ ಪ್ರತಿನಿಧಿಗಳನ್ನು ಮಾತುಕತೆಗೆ ಆಹ್ವಾನಿಸಿದ್ದಾರೆ.
ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು
ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು
ಜೆರುಸಲೇಮ್: ವಿವಾದಿತ ಪ್ರದೇಶ ವೆಸ್ಟ್ ಬ್ಯಾಂಕ್ ನಲ್ಲಿ ನೆಲೆ ಸ್ಥಾಪಿಸಿರುವುದಕ್ಕೆ ಸಂಬಂಧಿಸಿದಂತೆ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಇಸ್ರೇಲ್ ವಿರುದ್ಧದ ನಿರ್ಣಯ ಅಂಗೀಕಾರವಾಗಿರುವ ಹಿನ್ನೆಲೆಯಲ್ಲಿ ಪ್ರಧಾನಿ ಬೆಂಜಮಿನ್ ನೇತನ್ಯಾಹು ಭದ್ರತಾ ಮಂಡಳಿಯ ಸದಸ್ಯ ರಾಷ್ಟ್ರಗಳ ಪ್ರತಿನಿಧಿಗಳನ್ನು ಮಾತುಕತೆಗೆ ಆಹ್ವಾನಿಸಿದ್ದಾರೆ. 
ಫ್ರಾನ್ಸ್, ಬ್ರಿಟನ್, ಚೀನಾ, ರಷ್ಯಾ, ಸ್ಪೇನ್, ಜಪಾನ್, ಈಜಿಪ್ಟ್, ಅಂಗೋಲಾ, ಉಕ್ರೇನ್ ಹಾಗೂ ಉರುಗ್ವೆ ಸೇರಿದಂತೆ 10 ರಾಷ್ಟ್ರಗಳ ಪ್ರತಿನಿಧಿಗಳು ಜೆರುಸಲೇಮ್ ನಲ್ಲಿರುವ ವಿದೇಶಾಂಗ ಸಚಿವಾಲಯದ ಕೇಂದ್ರ ಕಚೇರಿಗೆ ಆಗಮಿಸಿದ್ದಾರೆ. ಈ ಸಭೆ ರಾಜತಾಂತ್ರಿಕತೆ ಮತ್ತು ಆರ್ಥಿಕವಾಗಿ ವಿಶ್ವಸಂಸ್ಥೆಯ ಸದಸ್ಯ ರಾಷ್ಟ್ರಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ಉದ್ದೇಶದ ಭಾಗವಾಗಿದೆ ಎಂದು ವಿಶ್ಲೇಷಿಸಲಾಗುತ್ತಿದೆ.   
ಇದಕ್ಕೂ ಮುನ್ನ ನಡೆದ ಸಂಪುಟ ಸಭೆಯಲ್ಲಿ ನೇತನ್ಯಾಹು, ಇಸ್ರೇಲ್ ವಿರುದ್ಧದ ನಿರ್ಣಯವನ್ನು ಬೆಂಬಲಿಸಿದ್ದ ಅಮೆರಿಕ ಅಧ್ಯಕ್ಷ ಬರಾಕ್ ಒಬಾಮ ಅವರ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ, " ಭದ್ರತಾ ಮಂಡಳಿಯಲ್ಲಿ ಮಂಡನೆಯಾದ ನಿರ್ಣಯದ ಬೆನ್ನಿಗೆ ಅಮೆರಿಕ ನಿಂತಿತ್ತು ಎಂಬುದರಲ್ಲಿ ಅನುಮಾನವಿಲ್ಲ ಎಂಬ ಇಸ್ರೇಲ್ ಪ್ರಧಾನಿ ಹೇಳಿಕೆಯನ್ನು ಪ್ರಧಾನಿ ಕಾರ್ಯಾಲಯ ಬಿಡುಗಡೆ ಮಾಡಿದೆ. 
ಪ್ಯಾಲೆಸ್ಟೇನ್ ಹಕ್ಕು ಪ್ರತಿಪಾದನೆ ಮಾಡುತ್ತಿರುವ ವಿವಾದಿತ ಪ್ರದೇಶ ವೆಸ್ಟ್ ಬ್ಯಾಂಕ್ ನಲ್ಲಿ ಇಸ್ರೇಲ್ ತನ್ನ ನೆಲೆಯನ್ನು ಸ್ಥಾಪಿಸಿತ್ತು. ಈ ವಿಷಯವಾಗಿ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಇಸ್ರೇಲ್ ವಿರುದ್ಧ ಕೈಗೊಂಡ ನಿರ್ಣಯವನ್ನು ಭದ್ರತಾ ಮಂಡಳಿಯ 14 ರಾಷ್ಟ್ರಗಳು ಬೆಂಬಲಿಸಿದ್ದವು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com