ಚಿಲಿಯಲ್ಲಿ ಪ್ರಬಲ ಭೂಕಂಪನ: ರಿಕ್ಟರ್ ಮಾಪಕದಲ್ಲಿ 7.6ರಷ್ಟು ತೀವ್ರತೆ ದಾಖಲು

ದಕ್ಷಿಣ ಚಿಲಿಯಲ್ಲಿ ಪ್ರಬಲ ಭೂಕಂಪನ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 7.6ರಷ್ಟು ತೀವ್ರತೆ ದಾಖಲಾಗಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಸ್ಯಾಂಟಿಯಾಗೋ: ದಕ್ಷಿಣ ಚಿಲಿಯಲ್ಲಿ ಪ್ರಬಲ ಭೂಕಂಪನ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 7.6ರಷ್ಟು ತೀವ್ರತೆ ದಾಖಲಾಗಿದೆ.

ದಕ್ಷಿಣ ಚಿಲಿಯ ಕ್ವೆಲಾನ್ ಪ್ರಾಂತ್ಯದಲ್ಲಿ ಭೂಕಂಪನದ ಕೇಂದ್ರ ಬಿಂದು ದಾಖಲಾಗಿದ್ದು, ಚಿಲಿಯ ಹಲವು ಕರಾವಳಿ ತೀರ ಪ್ರದೇಶದಲ್ಲಿ ಹವಾಮಾನ ಇಲಾಖೆ ಅಧಿಕಾರಿಗಳು ಸುನಾಮಿ ಎಚ್ಚರಿಕೆ ನೀಡಿದ್ದಾರೆ. ಆದರೆ ಈ ವರೆಗೂ  ಭೂಕಂಪನದಿಂದ ಸಾವು-ನೋವಾದ ಕುರಿತು ವರದಿಗಳಾಗಿಲ್ಲ. ಮುಂಜಾಗ್ರತಾ ಕ್ರಮವಾಗಿ ಚಿಲಿಯ ಕರಾವಳಿ ತೀರ ಪ್ರದೇಶಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಗಳನ್ನು ಮುಚ್ಚಲಾಗಿದ್ದು, ಕರಾವಳಿ ತೀರ ಪ್ರದೇಶದಲ್ಲಿರುವ ಲಕ್ಷಾಂತರ  ಮಂದಿಯನ್ನು ಸುರಕ್ಷಿತ ಪ್ರದೇಶಕ್ಕೆ ರವಾನಿಸಲಾಗುತ್ತಿದೆ.

ಪ್ರಬಲ ಭೂಕಂಪನದಿಂದ ಚಿಲಿಯ ಪ್ರಮುಖ ವಿದ್ಯುತ್ ಘಟಕಕ್ಕೆ ಹಾನಿಯಾಗಿದ್ದು ಕರಾವಳಿ ತೀರದ ಸುಮಾರು 21 ಸಾವಿರ ಮನೆಗಳು ಇದೀಗ ಕತ್ತಲೆಯಲ್ಲಿ ಕಾಲ ಕಳೆಯುವಂತಾಗಿದೆ. ಚಿಲಿಯ ಹವಾಮಾನ ಇಲಾಖೆ ಸಮುದ್ರದಲ್ಲಿನ  ಬೆಳವಣಿಗೆಗಳನ್ನು ಪರಿಶೀಲಿಸುತ್ತಿದ್ದು, ಮುಂಜಾಗ್ರತಾ ಕ್ರಮವಾಗಿ ಕರಾವಳಿ ತೀರದಲ್ಲಿ ಸುಮಾರು 40 ಸಾವಿರಕ್ಕೂ ಅಧಿಕ ಮಂದಿಯನ್ನು ಸುರಕ್ಷಿತ ಪ್ರದೇಶಕ್ಕೆ ರವಾನಿಸಿದ್ದಾರೆ ಎಂದು ತಿಳಿದುಬಂದಿದೆ. ಪ್ರಸ್ತುತ ಭೂಕಂಪನ  ಸಂಭವಿಸಿರುವ ಕ್ವೆಲಾನ್ ಪ್ರದೇಶ ಪ್ರವಾಸಿ ತಾಣವಾಗಿದ್ದು, ಇಲ್ಲಿ ಹಲವಾರು ಸುಂದರ ದ್ವೀಪಗಳಿವೆ. ಹೀಗಾಗಿ ಪ್ರತಿನಿತ್ಯ ಇಲ್ಲಿಗೆ ಸಾವಿರಾರು ಮಂದಿ ಪ್ರವಾಸಿಗರು ಆಗಮಿಸುತ್ತಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com