ಸಿಂಧೂ ನದಿ ನೀರು ಹಂಚಿಕೆ ವಿವಾದ: ಪಾಕ್ ವಿತ್ತ ಸಚಿವರನ್ನು ಚರ್ಚೆಗೆ ಕರೆದ ವಿಶ್ವಬ್ಯಾಂಕ್ ಅಧ್ಯಕ್ಷ

ಸಿಂಧೂ ನದಿ ನೀರು ಹಂಚಿಕೆ ಒಪ್ಪಂದಕ್ಕೆ ಸಂಬಂಧಿಸಿದಂತೆ ಚರ್ಚೆ ನಡೆಸುವ ಸಲುವಾಗಿ ವಿಶ್ವಬ್ಯಾಂಕ್ ಅಧ್ಯಕ್ಷ ಜಿಮ್ ಯಾಂಗ್ ಕಿಮ್ ಅವರು ಪಾಕಿಸ್ತಾನ ಆರ್ಥಿಕ ಸಚಿವರನ್ನು ಆಹ್ವಾನಿಸಿದ್ದಾರೆಂದು...
ವಿಶ್ವಬ್ಯಾಂಕ್ ಅಧ್ಯಕ್ಷ ಜಿಮ್ ಯಾಂಗ್ ಕಿಮ್
ವಿಶ್ವಬ್ಯಾಂಕ್ ಅಧ್ಯಕ್ಷ ಜಿಮ್ ಯಾಂಗ್ ಕಿಮ್

ವಾಷಿಂಗ್ಟನ್: ಸಿಂಧೂ ನದಿ ನೀರು ಹಂಚಿಕೆ ಒಪ್ಪಂದಕ್ಕೆ ಸಂಬಂಧಿಸಿದಂತೆ ಚರ್ಚೆ ನಡೆಸುವ ಸಲುವಾಗಿ ವಿಶ್ವಬ್ಯಾಂಕ್ ಅಧ್ಯಕ್ಷ ಜಿಮ್ ಯಾಂಗ್ ಕಿಮ್ ಅವರು ಪಾಕಿಸ್ತಾನ ಆರ್ಥಿಕ ಸಚಿವರನ್ನು ಆಹ್ವಾನಿಸಿದ್ದಾರೆಂದು ಮಂಗಳವಾರ ತಿಳಿದುಬಂದಿದೆ.

ಸಿಂಧೂ ಒಪ್ಪಂದ ರದ್ದಾಗುವ ಭೀತಿ ಎದುರಾಗಿರುವ ಕಾರಣ ಪಾಕಿಸ್ತಾನ ಹಣಕಾಸು ಸಚಿವ ಇಶಾಕ್ ದಾರ್ ಅವರು, ಕೆಲ ದಿನಗಳ ಹಿಂದಷ್ಟೇ ವಿಶ್ವಬ್ಯಾಂಕ್ ಅಧ್ಯಕ್ಷ ಜಿಮ್ ಯಾಂಗ್ ಕಿಮ್ ಅವರಿಗೆ ಪತ್ರವೊಂದನ್ನು ಬರೆದಿದ್ದರು.

ಭಾರತ ಮತ್ತು ಪಾಕಿಸ್ತಾನದ ನಡುವಿನ ವಿವಾದಕ್ಕೆ ಕಾರಣವಾಗಿರುವ ಕಿಶನ್ ಗಂಗಾ ಮತ್ತು ರ್ಯಾಟಲ್ ಜನ ವಿದ್ಯುತ್ ಯೋಜನೆಗಳನ್ನು ತಡೆಹಿಡಿಯುವ ವಿಚಾರದ ಕುರಿತು ಪತ್ರದಲ್ಲಿ ಹೇಳಿಕೊಂಡಿತ್ತು. ಸಿಂಧೂ ನದಿ ನೀರು ಹಂಚಿಕೆ ಒಪ್ಪಂದಕ್ಕೆ ಸಂಬಂಧಿಸಿದಂತೆ ವಿಶ್ವಬ್ಯಾಂಕ್ ತನ್ನ ಕರ್ತವ್ಯವನ್ನು ಪೂರೈಸಬೇಕೆಂದು ಹೇಳಿಕೊಂಡಿತ್ತು.

ಈ ಹಿನ್ನಲೆಯಲ್ಲಿ ಪಾಕಿಸ್ತಾನದ ಪತ್ರಕ್ಕೆ ಪ್ರತಿಕ್ರಿಯೆ ನೀಡಿರುವ ಜಿಲ್ ಯಾಂಗ್ ಕಿಮ್ ಅವರು, ವಿವಾದ ಕುರಿತಂತೆ ಚರ್ಚೆ ನಡೆಸಲು ಇಶಾಕ್ ದಾರ್ ಅವರಿಗೆ ಆಹ್ವಾನ ನೀಡಿದ್ದಾರೆಂದು ಮೂಲಗಳು ತಿಳಿಸಿವೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com