ವಿಶ್ವಸಂಸ್ಥೆಯಿಂದ ಮಸೂದ್ ನಿಷೇಧಕ್ಕೆ ಮತ್ತೆ ಚೀನಾ ಅಡ್ಡಗಾಲು: ಭಾರತ ಕೆಂಡಾಮಂಡಲ

ಜೈಶ್-ಇ-ಮೊಹಮ್ಮದ್ ಉಗ್ರ ಸಂಘಟನೆಯ ಮುಖ್ಯಸ್ಥ ಮಸೂದ್ ಅಜರ್ ಗೆ ವಿಶ್ವಸಂಸ್ಥೆಯಿಂದ ನಿಷೇಧ ವಿಧಿಸುವ ವಿಷಯವಾಗಿ ಚೀನಾ ಮತ್ತೊಮ್ಮೆ ಅಡ್ಡಗಾಲು ಹಾಕಿದ್ದು ಭಾರತದ ಕೆಂಗಣ್ಣಿಗೆ ಗುರಿಯಾಗಿದೆ.
ವಿದೇಶಾಂಗ ಇಲಾಖೆ ವಕ್ತಾರ ವಿಕಾಸ್ ಸ್ವರೂಪ್
ವಿದೇಶಾಂಗ ಇಲಾಖೆ ವಕ್ತಾರ ವಿಕಾಸ್ ಸ್ವರೂಪ್
Updated on: 
ನವದೆಹಲಿ: ಜೈಶ್-ಇ-ಮೊಹಮ್ಮದ್ ಉಗ್ರ ಸಂಘಟನೆಯ ಮುಖ್ಯಸ್ಥ ಮಸೂದ್ ಅಜರ್ ಗೆ ವಿಶ್ವಸಂಸ್ಥೆಯಿಂದ ನಿಷೇಧ ವಿಧಿಸುವ ವಿಷಯವಾಗಿ ಚೀನಾ ಮತ್ತೊಮ್ಮೆ ಅಡ್ಡಗಾಲು ಹಾಕಿದ್ದು ಭಾರತದ ಕೆಂಗಣ್ಣಿಗೆ ಗುರಿಯಾಗಿದೆ. 
ಚೀನಾದ ನಡೆಯನ್ನು ಭಾರತದ ವಿದೇಶಾಂಗ ಸಚಿವಾಲಯ ದುರದೃಷ್ಟಕರ ಎಂದು ಹೇಳಿದ್ದು, ಚೀನಾ ಸ್ವತಃ ಭಯೋತ್ಪಾದನೆಯ ಸಮಸ್ಯೆ ಎದುರಿಸುತ್ತಿದೆ. ಅಷ್ಟೇ ಅಲ್ಲದೇ ಎಲ್ಲಾ ರೀತಿಯ ಭಯೋತ್ಪಾದನೆಗೂ ವಿರೋಧ ವ್ಯಕ್ತಪಡಿಸಿತ್ತು ಎಂದು ವಿದೇಶಾಂಗ ಸಚಿವಾಲಯದ ವಕ್ತಾರ ವಿಕಾಸ್ ಸ್ವರೂಪ್ ಹೇಳಿದ್ದಾರೆ. 
ಚೀನಾ ವಿರೋಧದ ಪರಿಣಾಮವಾಗಿ ಮಸೂದ್ ಅಜರ್ ನ್ನು ನಿಷೇಧಿತ ಉಗ್ರರ ಪಟ್ಟಿಗೆ ಸೇರಿಸುವ ಪ್ರಕ್ರಿಯೆ ಮತ್ತೊಮ್ಮೆ ವಿಫಲವಾಗಿದೆ. ಮಸೂದ್ ಅಜರ್ ಹಾಗೂ ಆತನ ಉಗ್ರ ಸಂಘಟನೆಯನ್ನು ನಿಷೇಧಿತ ಉಗ್ರ ಸಂಘನೆ ಪಟ್ಟಿಗೆ ಸೇರಿಸಲು  ಅಂತಾರಾಷ್ಟ್ರೀಯ ಸಮುದಾಯದ ಅಸಾಮರ್ಥ್ಯ ಭಯೋತ್ಪಾದನೆಯ ವಿರುದ್ಧದ ಹೋರಾಟದಲ್ಲಿನ ದ್ವಿಮುಖ ನೀತಿಯನ್ನು ತೋರುತ್ತದೆ ಎಂದು ಭಾರತೀಯ ವಿದೇಶಾಂಗ ಇಲಾಖೆ ಹೇಳಿದೆ. ಮಸೂದ್ ಅಜರ್ ಗೆ ನಿಷೇಧ ವಿಧಿಸುವ ವಿಷಯವಾಗಿ ಭಾರತದ ನಿರಂತರ ಮನವಿಯ ಹೊರತಾಗಿಯೂ ಚೀನಾ ಮೂರನೇ ಬಾರಿಗೆ ಭಾರತದ ಯತ್ನಕ್ಕೆ ಅಡ್ಡಿ ಉಂಟುಮಾಡಿದೆ.  

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com