ತೈವಾನ್ ನಲ್ಲಿ ಭೂಕಂಪ: ಮಗು ಸೇರಿ 3 ಸಾವು, 154ಕ್ಕೂ ಹೆಚ್ಚು ಮಂದಿಗೆ ಗಾಯ

ತೈವಾನ್ ದಕ್ಷಿಣ ಭಾಗದಲ್ಲಿ 6.4 ತೀವ್ರತೆಯಲ್ಲಿ ಭೂಕಂಪ ಸಂಭವಿಸಿದ ಪರಿಣಾಮ 10 ತಿಂಗಳ ಮಗು ಸೇರಿದಂತೆ ಮೂವರು...
ಕಟ್ಟಡದ ಅವಶೇಷಗಳಡಿಯಲ್ಲಿ ಸಿಲುಕಿರುವವರ ರಕ್ಷಣಾ ಕಾರ್ಯಾಚರಣೆ...
ಕಟ್ಟಡದ ಅವಶೇಷಗಳಡಿಯಲ್ಲಿ ಸಿಲುಕಿರುವವರ ರಕ್ಷಣಾ ಕಾರ್ಯಾಚರಣೆ...
ತೈಪೆ: ತೈವಾನ್ ದಕ್ಷಿಣ ಭಾಗದಲ್ಲಿ 6.4 ತೀವ್ರತೆಯಲ್ಲಿ ಭೂಕಂಪ ಸಂಭವಿಸಿದ ಪರಿಣಾಮ 10 ತಿಂಗಳ ಮಗು ಸೇರಿದಂತೆ ಮೂವರು ಮೃತಪಟ್ಟಿದ್ದು, 150ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಶನಿವಾರ ಬೆಳಿಗ್ಗೆ ನಡೆದಿದೆ.
ಇಂದು ಬೆಳಿಗ್ಗೆ ಸಂಭವಿಸಿದ ಭೂಕಂಪನದಲ್ಲಿ ಅನೇಕ ಕಟ್ಟಡಗಳು ಧ್ವಂಸವಾಗಿದ್ದು, ಅವಶೇಷಗಳಡಿ ಸಿಲುಕಿರುವವರ ರಕ್ಷಣಾ ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 
ಧ್ವಂಸಗೊಂಡಿದ್ದ ಕಟ್ಟಡದೊಳಗಿದ್ದ 10 ತಿಂಗಳ ಮಗು, ಒರ್ವ ಪುರುಷ ಮತ್ತು ಮಹಿಳೆಯ ಮೃತದೇಹವನ್ನು ಹೊರತೆಗೆಯಲಾಗಿದೆ. ಅದೇ ಕಟ್ಟಡದೊಳಗೆ ಸಿಲುಕಿದ್ದ 29 ನಿವಾಸಿಗಳು ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ಅದಲ್ಲದೇ, 7 ಅಂತಸ್ತಿನ ಕಟ್ಟಡವೊಂದು ಕುಸಿದಿದ್ದು, ಅದರಲ್ಲಿದ್ದ 200 ಮಂದಿಯನ್ನು ರಕ್ಷಿಸಲಾಗಿದ್ದು, 100 ಮಂದಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. 
ಈ ಪ್ರದೇಶದಲ್ಲಿ ಆಗಾಗ ಭೂಕಂಪನ ಸಂಭವಿಸುತ್ತಿರುತ್ತದೆ. 2013ರಲ್ಲಿ ಸಂಭವಿಸಿದ ಭೂಕಂಪನದಲ್ಲಿ ನಾಲ್ವರು ಮೃತಪಟ್ಟಿದ್ದರು. ಇನ್ನು 1999ರಲ್ಲಿ 7.6 ತೀವ್ರತೆಯಲ್ಲಿ ಭೂಕಂಪ ಸಂಭವಿಸಿ ಸುಮಾರು 2,400 ಜನರು ಮೃತಪಟ್ಟಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com