ಈ ಬಗ್ಗೆ ಟ್ವೀಟ್ ಮಾಡಿರುವ ಅಫ್ಘಾನಿಸ್ತಾನದಲ್ಲಿರುವ ಭಾರತೀಯ ರಾಯಭಾರಿ ಅಮರ್ ಸಿನ್ಹಾ ಅವರು, ಮಜಾರ್‌ನಲ್ಲಿ ವಿಶೇಷ ಪಡೆಗಳು ಉಗ್ರರ ವಿರುದ್ಧ ಕಾರ್ಯಾಚರಣೆಯನ್ನು ಅಂತ್ಯಗೊಳಿಸುತ್ತಿದ್ದು, ದೊಡ್ಡ ಸಮರವೇ ನಡೆಯುತ್ತಿದೆ. ಖುದ್ದು ರಾಜ್ಯಪಾಲ ನೂರ್ ಅವರೇ ಕಾರ್ಯಾಚರಣೆಯ ಮೇಲ್ವಿಚಾರಣೆ ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ.