ಪಠಾನ್ ಕೋಟ್ ದಾಳಿ ಬಗ್ಗೆ ಭಾರತ ನೀಡಿರುವ ಮಾಹಿತಿಯ ಮೇಲೆ ಕೆಲಸ ಮಾಡುತ್ತಿದ್ದೇವೆ: ಪಾಕಿಸ್ತಾನ

ದಾಳಿಗೆ ಸಂಬಂಧಿಸಿದಂತೆ ಭಾರತ ಸರ್ಕಾರ ನೀಡಿರುವ ಮಾಹಿತಿಯನ್ನಾಧರಿಸಿ ಉಗ್ರರನ್ನು ಪತ್ತೆ ಮಾಡುವ ಕಾರ್ಯಾಚರಣೆ ನಡೆಸುತ್ತಿದ್ದೇವೆ ಎಂದು ಹೇಳಿದೆ.
ಪಾಕಿಸ್ತಾನ
ಪಾಕಿಸ್ತಾನ
Updated on: 

ನವದೆಹಲಿ: ಪಠಾಣ್ ಕೋಟ್ ನ ವಾಯುನೆಲೆಯಲ್ಲಿ ನಡೆದ ಭಯೋತ್ಪಾದಕ ದಾಳಿಯ ಬಗ್ಗೆ ಪಾಕಿಸ್ತಾನ ಪ್ರತಿಕ್ರಿಯೆ ನೀಡಿದ್ದು, ದಾಳಿಗೆ ಸಂಬಂಧಿಸಿದಂತೆ ಭಾರತ ಸರ್ಕಾರ ನೀಡಿರುವ ಮಾಹಿತಿಯನ್ನಾಧರಿಸಿ ಉಗ್ರರನ್ನು ಪತ್ತೆ ಮಾಡುವ ಕಾರ್ಯಾಚರಣೆ ನಡೆಸುತ್ತಿದ್ದೇವೆ ಎಂದು ಹೇಳಿದೆ.
ಭಾರತ ಸರ್ಕಾರದೊಂದಿಗೆ ಪಾಕಿಸ್ತಾನ ಸರ್ಕಾರ ನಿರಂತರ ಸಂಪರ್ಕದಲ್ಲಿದೆ. ಭಯೋತ್ಪಾದನೆ ನಿರ್ಮೂಲನೆ ಮಾಡಲು ಪಾಕಿಸ್ತಾನ ಬದ್ಧವಾಗಿದೆ ಎಂದು ಪಾಕಿಸ್ತಾನದ ವಿದೇಶಾಂಗ ಇಲಾಖೆ ಹೇಳಿಕೆ ನೀಡಿದೆ. ಭಾರತದಲ್ಲಿ ಭಯೋತ್ಪಾದಕ ಕೃತ್ಯ ನಡೆದಿರುವುದು ದುರದೃಷ್ಟಕರ. ಉಗ್ರರ ದಾಳಿಯಲ್ಲಿ ಮಡಿದವರ ಕುಟುಂಬದ ನೋವು ನಮಗೆ ಅರ್ಥವಾಗುತ್ತದೆ, ಪಾಕಿಸ್ತಾನವೂ ಸಹ ಭಯೋತ್ಪಾದನೆಯ ಬಲಿಪಶುವಾಗಿದೆ ಎಂದು ಪಾಕ್ ವಿದೇಶಾಂಗ ಇಲಾಖೆ ಹೇಳಿಕೆ ನೀಡಿದೆ.
ಪಾಕ್ ವಿದೇಶಾಂಗ ಇಲಾಖೆ ಭಾರತ ಸರ್ಕಾರ ನೀಡಿರುವ ಮಾಹಿತಿಯ ಬಗ್ಗೆ ಹೆಚ್ಚಿನ ವಿವರಣೆ ನೀಡಿಲ್ಲವಾದರೂ, ಭಾರತ-ಪಾಕಿಸ್ತಾನ ಎರಡೂ ರಾಷ್ಟ್ರಗಳು ಮಾತುಕತೆ ಪ್ರಕ್ರಿಯೆಗೆ ಬದ್ಧವಾಗಿರಬೇಕು ಎಂದು ಸಲಹೆ ನೀಡಿದೆ. ಪಠಾಣ್ ಕೋಟ್ ನ ಉಗ್ರ ದಾಳಿಯ ರೂವಾರಿಗಳು ಪಾಕಿಸ್ತಾನದಲ್ಲಿದ್ದಾರೆ ಎಂದು ಉಗ್ರರ ದೂರವಾಣಿ ಸಂಭಾಷಣೆ ಮೂಲಕ ಬಹಿರಂಗವಾಗಿದೆ. ಭಾರತ-ಪಾಕಿಸ್ತಾನದ ವಿದೇಶಾಂಗ ಕಾರ್ಯದರ್ಶಿಗಳ ಸಭೆಯ ವೇಳೆ ಪಠಾಣ್ ಕೋಟ್ ನಲ್ಲಿ ನಡೆದ ಉಗ್ರರ ದಾಳಿಗೂ ಪಾಕಿಸ್ತಾನಕ್ಕೂ ಸಂಬಂಧವಿರುವುದರ ಬಗ್ಗೆ ಸಾಕ್ಷ್ಯ ಸಮೇತ ವಿವರಗಳನ್ನು ನೀಡಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com