ಆಪ್ಘಾನಿಸ್ತಾನದ ಭಾರತೀಯ ರಾಯಭಾರ ಕಚೇರಿ ಬಳಿ ಆತ್ಮಾಹುತಿ ಬಾಂಬ್ ಸ್ಫೋಟ

ಆಪ್ಘಾನಿಸ್ತಾನದಲ್ಲಿ ಉಗ್ರರು ಮತ್ತೆ ತಮ್ಮ ಅಟ್ಟಹಾಸ ಮುಂದುವರಿಸಿದ್ದಾರೆ. ಆಫ್ಘಾನಿಸ್ತಾನದ ಜಲಾಲಾಬಾದ್ ನಲ್ಲಿರುವ ಭಾರತೀಯ ರಾಯಭಾರ ಕಚೇರಿ ಮುಂದೆ ...
ಗೂಗಲ್ ಮ್ಯಾಪ್
ಗೂಗಲ್ ಮ್ಯಾಪ್

ಜಲಾಲಾಬಾದ್: ಆಪ್ಘಾನಿಸ್ತಾನದ ಜಲಾಲಾಬಾದ್ ನಲ್ಲಿರುವ ಭಾರತೀಯ ರಾಯಭಾರ ಕಚೇರಿ ಮುಂದೆ ಆತ್ಮಾಹುತಿ ಬಾಂಬ್ ಸ್ಫೋಟವಾಗಿದೆ.

ಭಾರತೀಯ ರಾಯಭಾರ ಕಚೇರಿಯಿಂದ 200 ಮೀಟರ್ ದೂರದಲ್ಲಿ ಬಾಂಬ್ ಸ್ಫೋಟಗೊಂಡಿದ್ದು, ವಿದೇಶಿಯರನ್ನು ಗುರಿಯಾಗಿಸಿಕೊಂಡು ಸ್ಫೋಟ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಭಾರತೀಯ ರಾಯಭಾರ ಕಚೇರಿಯಲ್ಲಿ ಕೆಲಸ ಮಾಡುವ ಎಲ್ಲಾ ಸಿಬ್ಬಂದಿ ಸುರಕ್ಷಿತವಾಗಿದ್ದಾರೆ. ಅದೃಷ್ಟ ವಶಾತ್ ಘಟನೆಯಲ್ಲಿ ಯಾವುದೇ ಸಾವು ನೋವು ಸಂಭವಿಸಿಲ್ಲ. ಭಾರತೀಯ ದೂತವಾಸ ಕಚೇರಿಯನ್ನು ಗುರಿಯಾಗಿಸಿಕೊಂಡು ಕಳೆದ 10 ದಿನಗಳಲ್ಲಿ 3 ನೇ ಭಾರಿ ದಾಳಿ ನಡೆಸಲಾಗಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಭಾರತೀಯ ರಾಯಭಾರ ಕಚೇರಿ ಮಝರ್- ಐ- ಶರೀಫ್ ಮುಂದೆ ಜನವರಿ 3 ರಂದು ನಡೆದ ದಾಳಿಯ ಹಿಂದೆ ಪಾಕಿಸ್ತಾನದ ಮಿಲಿಟರಿ ಅಧಿಕಾರಿಯ ಕೈವಾಡವಿದೆ ಎಂದು ಆಪ್ಘನ್ ನ ಹಿರಿಯ ಪೊಲೀಸ್ ಅಧಿಕಾರಿ ಆರೋಪಿಸಿದ್ದಾರೆ.

 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com