ಟರ್ಕಿಯಲ್ಲಿ ಕಾರು ಬಾಂಬ್ ಸ್ಫೋಟ, ಐವರ ಸಾವು, 39 ಮಂದಿಗೆ ಗಾಯ

ಆಗ್ನೇಯ ಟರ್ಕಿಯ ಪೊಲೀಸ್ ಕೇಂದ್ರ ಕಚೇರಿ ಮೇಲೆ ನಡೆದ ಕಾರುಬಾಂಬ್ ಸ್ಫೋಟದಲ್ಲಿ ಐವರು ಸಾವನ್ನಪ್ಪಿ 36 ಮಂದಿ ಗಾಯಗೊಂಡಿದ್ದಾರೆ....
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on: 

ಇಸ್ತಾಂಬುಲ್:  ಆಗ್ನೇಯ ಟರ್ಕಿಯ ಪೊಲೀಸ್ ಕೇಂದ್ರ ಕಚೇರಿ ಮೇಲೆ ನಡೆದ ಕಾರುಬಾಂಬ್ ಸ್ಫೋಟದಲ್ಲಿ ಐವರು ಸಾವನ್ನಪ್ಪಿ 36 ಮಂದಿ ಗಾಯಗೊಂಡಿದ್ದಾರೆ. ದಾಳಿಗೆ ಬಲಿಯಾದವರಲ್ಲಿ ಒಬ್ಬ ಮಹಿಳೆ ಹಾಗೂ ಮಗು ಸೇರಿದೆ ಎನ್ನಲಾಗಿದೆ.

ಸುದ್ದಿ ತಿಳಿದೊಡನೆಯೇ ರಕ್ಷಣಾ ತಂಡಗಳು ಸ್ಥಳಕ್ಕೆ ಧಾವಿಸಿದ್ದು ರಕ್ಷಣಾ ಕಾರ್ಯಾಚರಣೆ ಆರಂಭಿಸಿವೆ. ದಿಯಾರ್​ಬಕಿರ್ ಪ್ರಾಂತ್ಯದ ಸಿನಾರ್ ಜಿಲ್ಲೆಯಲ್ಲಿ ಸಂಭವಿಸಿರುವ ಈ ದಾಳಿಯಲ್ಲಿ ಅವಶೇಷಗಳ ಮಧ್ಯೆ ಸಿಕ್ಕಿಹಾಕಿಕೊಂಡವರಿಗಾಗಿ ಶೋಧ ಮುಂದುವರೆಸಲಾಗುತ್ತಿದೆ. ಸ್ಫೋಟದಲ್ಲಿ ಅಕ್ಕಪಕ್ಕದ ಕಟ್ಟಡಗಳಿಗೂ ಹಾನಿಯಾಗಿದೆ ಎಂದು ವರದಿಗಳು ಹೇಳಿವೆ.

ಕುರ್ದಿಸ್ತಾನ್ ವರ್ಕರ್ಸ್ ಪಾರ್ಟಿ (ಪಿಕೆಕೆ) ಉಗ್ರಗಾಮಿಗಳು ಈ ಕೃತ್ಯ ಎಸಗಿದ್ದಾರೆ ಎಂದು ಅಧಿಕಾರಿಗಳು ಆರೋಪಿಸಿದ್ದಾರೆ. ಈ ಉಗ್ರಗಾಮಿಗಳು ಕುರ್ದಿಶ್ ಪ್ರಾಂತ್ಯದಲ್ಲಿ ಸಕ್ರಿಯರಾಗಿದ್ದಾರೆ. ಯಾವುದೇ ಸಂಘಟನೆ ಅಧಿಕೃತವಾಗಿ ಈವರೆಗೂ ದಾಳಿಯ ಹೊಣೆ ಹೊತ್ತುಕೊಂಡಿಲ್ಲ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com