

ಬೀಜಿಂಗ್: ವಾಯುವ್ಯ ಚೀನಾದಲ್ಲಿ ಪ್ರಬಲ ಭೂಕಂಪ ಸಂಭವಿಸಿದ್ದು, ಹಲವು ಮನೆಗಳು ಹಾನಿಗೊಳಗಾಗಿವೆ.
ಬೆಳಗ್ಗೆ 1.13ರ ಸುಮಾರಿಗೆ ಭೂಕಂಪ ಸಂಭವಿಸಿದ್ದು, ರಿಕ್ಟರ್ ಮಾಪನದಲ್ಲಿ 6.4ರಷ್ಟು ತೀವ್ರತೆ ದಾಖಲಾಗಿದ್ದು, ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ.
ಭೂಕಂಪದಿಂದಾಗಿ 20 ಮನೆಗಳಿಗೆ ತೀವ್ರ ಹಾನಿಯಾಗಿದ್ದು, 700 ಟೆಂಟ್ ಗಳನ್ನು ರವಾನಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.