ಈ ಸಂಬಂಧ ತೆಹ್ರೀಕ್ ಇ ತಾಲಿಬಾನ್ ಪಾಕಿಸ್ತಾನ(ಟಿಟಿಪಿ) ಉಗ್ರ ಸಂಘಟನೆ ಬಿಡುಗಡೆ ಮಾಡಿರುವ ವಿಡಿಯೋ ಫೇಸ್ ಬುಕ್ ನಲ್ಲಿ ವೈರಲ್ ಆಗಿದ್ದು, ವಿಡಿಯೋದಲ್ಲಿ ಖಲಿಫಾ ಉಮಪ್ ಮನ್ಸೂರ್ ಶಾಲೆಗಳ ಮೇಲೆ ದಾಳಿ ಮಾಡುವ ಮೂಲಕ ಅಲ್ಲಾನ ಕಾನೂನು ಪ್ರಶ್ನಿಸುವವರಿಗೆ ಪಾಠ ಕಲಿಸುವುದಾಗಿ ಎಚ್ಚರಿಸಿದ್ದಾನೆ. ಇದೇ ಮನ್ಸೂರ್ ಬಚಾಖಾನ್ ವಿವಿ ಮೇಲೆ ಟಿಟಿಪಿ ದಾಳಿ ಮಾಡಿರುವುದಾಗಿ ಹೇಳಿಕೊಂಡಿದ್ದ.