

ಟೊರಂಟೊ: ಹಿರಿಯ ಪ್ರಾಥಮಿಕ ಶಾಲೆಯೊಂದರ ಮೇಲೆ ಮತ್ತು ಉತ್ತರ ಸಸ್ಕಾಷೆವನ್ ನ ಆದಿವಾಸಿ ಸಮುದಾಯದ ಮೇಲೆ ಬಂಧೂಕುದಾರಿಯೊಬ್ಬ ಗುಂಡಿನ ದಾಳಿ ನಡೆಸಿದ್ದರಿಂದ ಐದು ಜನ ಮೃತಪಟ್ಟು ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಕೆನಡಾ ಪ್ರಧಾನಿ ಹೇಳಿದ್ದಾರೆ.
ಗುಂಡಿನ ದಾಳಿ ನಡೆಸಿದ ಶಂಕಿತನ್ನನು ಬಂಧಿಸಲಾಗಿದೆ ಎಂದು ಪ್ರಧಾನಿ ಜಸ್ಟಿನ್ ಟ್ರಡೋ ಸ್ವಿಟ್ಸರ್ಲ್ಯಾಂಡಿನ ದವೋಸ್ ನಿಂದ ತಿಳಿಸಿದ್ದಾರೆ.
ಶಾಲೆಯಲಿ ಎಷ್ಟು ಜನ ಮೃತಪಟ್ಟಿದ್ದಾರೆ ಎಂದು ಇನ್ನೂ ಅಧಿಕೃತವಾಗಿ ತಿಳಿದುಬಂದಿಲ್ಲ ಎನ್ನಲಾಗಿದೆ. ಪೊಲೀಸರ ಅಧಿಕೃತ ಹೇಳಿಕೆಯನ್ನು ನಿರೀಕ್ಷಿಸಲಾಗಿದೆ.