

ಕರಾಚಿ: ಪಾಕಿಸ್ತಾನದ ಭದ್ರತಾ ಪಡೆ 45 ಭಾರತೀಯ ಮೀನುಗಾರರನ್ನು ಬಂಧಿಸಿದ್ದು, ಐದು ಬೋಟುಗಳನ್ನು ವಶಪಡಿಸಿಕೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ನಿನ್ನೆ ಭಾರತೀಯ ಮೀನುಗಾರರನ್ನು ಬಂಧಿಸಲಾಗಿದ್ದು, ಪೊಲೀಸರ ವಶಕ್ಕೆ ನೀಡಲಾಗಿದೆ. ಅರಬೀ ಸಮುದ್ರದ ಗಡಿಯಲ್ಲಿ ಮೀನುಗಾರಿಕೆ ಮಾಡುತ್ತಿದ್ದ ವೇಳೆ ಬಂಧಿಸಲಾಗಿದೆ ಎಂದು ತಿಳಿದು ಬಂದಿದೆ.
ಮೀನುಗಾರರ ವಿರುದ್ಧ ದೇಶದ ಸಮುದ್ರ ಸಂಬಂಧಿ ಗಡಿ ಉಲ್ಲಂಘನೆ ಆರೋಪದ ಮೇಲೆ ಪ್ರಕರಣ ದಾಖಲಿಸಲಾಗಿದೆ ಎಂದು ಕರಾಚಿಯಲ್ಲಿರುವ ಡಾಕ್ಸ್ ಪೊಲೀಸ್ ಠಾಣಾ ಸಿಬ್ಬಂದಿಗಳು ತಿಳಿಸಿದ್ದಾರೆ.
ಪಾಕಿಸ್ತಾನ ಮತ್ತು ಭಾರತ ನಡುವಿನ ಸಮುದ್ರ ಗಡಿ ಭಾಗದಲ್ಲಿ ಗಡಿ ಉಲ್ಲಂಘನೆ ಆರೋಪದ ಮೇಲೆ ಭಾರತೀಯ ಮೀನುಗಾರರನ್ನು ಪಾಕಿಸ್ತಾನವು ನಿಯಮಿತವಾಗಿ ಬಂಧಿಸುತ್ತಿರುತ್ತದೆ.