ನೈಜೀರಿಯಾದಲ್ಲಿ ಆತ್ಮಾಹುತಿ ಬಾಂಬ್ ದಾಳಿ: 13 ಸಾವು

ಆತ್ಮಾಹುತಿ ಬಾಂಬ್ ಸ್ಫೋಟದಿಂದಾಗಿ 13 ಜನ ಸಾವನ್ನಪ್ಪಿರುವ ಘಟನೆ ನೈಜೀರಿಯಾದ ಈಶಾನ್ಯ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
ಕನೋ: ಆತ್ಮಾಹುತಿ ಬಾಂಬ್ ಸ್ಫೋಟದಿಂದಾಗಿ 13 ಜನ ಸಾವನ್ನಪ್ಪಿರುವ ಘಟನೆ ನೈಜೀರಿಯಾದ ಈಶಾನ್ಯ ರಾಜ್ಯದಲ್ಲಿ ಬುಧವಾರ ನಡೆದಿದೆ. 
ನೈಜೀರಿಯಾದ ಈಶಾನ್ಯ ರಾಜ್ಯ ಚಿಬೋಕ್ ನಲ್ಲಿ ಆತ್ಮಾಹುತಿ ಬಾಂಬ್ ದಾಳಿ ನಡೆಸಲಾಗಿದೆ. ಘಟನೆಯಲ್ಲಿ 13 ಜನರು ಸಾವನ್ನಪ್ಪಿದ್ದು, 30ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. 
ಚಿಬೋಕ್ ನಲ್ಲಿರುವ ಮಾರುಕಟ್ಟೆಗೆ ಪ್ರವೇಶಿದ್ದ ಐವರು ಉಗ್ರರು ಪೈಕಿ ಮೂವರು ಆತ್ಮಾಹುತಿ ಬಾಂಬ್ ದಾಳಿ ನಡೆಸಿದ್ದು, ಇಬ್ಬರನ್ನು ಭದ್ರತಾ ಸಿಬ್ಬಂದಿಗಳು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ.
ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಕಾರ್ಯಾಚರಣೆ ನಡೆಸಿ 28ಕ್ಕೂ ಹೆಚ್ಚು ಜನರನ್ನು ರಕ್ಷಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com