ಬಾಂಗ್ಲಾದಲ್ಲಿ ಮತ್ತೆ ಅಟ್ಟಹಾಸ ಮೆರೆದ ಉಗ್ರರು: ರಂಜಾನ್ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ

ಇತ್ತೀಚೆಗಷ್ಟೇ ಉಗ್ರ ದಾಳಿಯಿಂದ ತತ್ತರಿಸಿ ಹೋಗಿದ್ದ ಬಾಂಗ್ಲಾದೇಶದಲ್ಲಿ ಮತ್ತೆ ಉಗ್ರರು ತಮ್ಮ ಅಟ್ಟಹಾಸ ಮೆರೆದಿದ್ದು, ಪವಿತ್ರ ರಂಜಾನ್ ಹಬ್ಬದ ನಿಮಿತ್ತ ಮುಸ್ಲಿಮರು ಸಾಮೂಹಿಕ ಪ್ರಾರ್ಥನೆ ಸಲ್ಲಿಸುತ್ತಿದ್ದ ವೇಳೆ ಬಾಂಬ್ ಸ್ಫೋಟಗೊಳಿಸಲಾಗಿದೆ.
ರಂಜಾನ್ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ (ಸಂಗ್ರಹ ಚಿತ್ರ)
ರಂಜಾನ್ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ (ಸಂಗ್ರಹ ಚಿತ್ರ)

ಢಾಕಾ: ಇತ್ತೀಚೆಗಷ್ಟೇ ಉಗ್ರ ದಾಳಿಯಿಂದ ತತ್ತರಿಸಿ ಹೋಗಿದ್ದ ಬಾಂಗ್ಲಾದೇಶದಲ್ಲಿ ಮತ್ತೆ ಉಗ್ರರು ತಮ್ಮ ಅಟ್ಟಹಾಸ ಮೆರೆದಿದ್ದು, ಪವಿತ್ರ ರಂಜಾನ್ ಹಬ್ಬದ ನಿಮಿತ್ತ ಮುಸ್ಲಿಮರು ಸಾಮೂಹಿಕ  ಪ್ರಾರ್ಥನೆ ಸಲ್ಲಿಸುತ್ತಿದ್ದ ವೇಳೆ ಬಾಂಬ್ ಸ್ಫೋಟಗೊಳಿಸಲಾಗಿದೆ.

ಬಾಂಗ್ಲಾದೇಶ ರಾಜಧಾನಿ ಢಾಕಾದ ಕಿಶೋರ್ ಗಂಜ್ ಪ್ರದೇಶದಲ್ಲಿರುವ ಶೋಲ್ಕಿಯಾ ಈದ್ಗಾ ಮೈದಾನದಲ್ಲಿ ಸಾವಿರಾರು ಮುಸ್ಲಿಂ ಬಾಂಧವರು ಸಾಮೂಹಿಕ ಪ್ರಾರ್ಥನೆ ಸಲ್ಲಿಸುತ್ತಿದ್ದ ವೇಳೆ  ಬಾಂಬ್ ಸ್ಫೋಟಗೊಂಡಿದ್ದು, ಘಟನೆಯಲ್ಲೇ ಭದ್ರತೆಗಾಗಿ ನಿಯೋಜನೆಗೊಂಡಿದ್ದ ಓರ್ವ ಪೊಲೀಸ್ ಪೇದೆ ಸಾವನ್ನಪ್ಪಿದ್ದಾನೆ ಎಂದು ತಿಳಿದುಬಂದಿದೆ. ಅಲ್ಲದೆ ಸುಮಾರು 21ಕ್ಕೂ ಹೆಚ್ಚು ಮಂದಿ  ಗಾಯಗೊಂಡಿದ್ದು, ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ.

ಅಂತೆಯೇ ಬಾಂಬ್ ದಾಳಿ ಸಂಭವಿಸುತ್ತಿದ್ದಂತೆಯೇ ಶಸ್ತ್ರ ಸಜ್ಜಿತ ಉಗ್ರರು ಭದ್ರತಾ ಪಡೆಗಳ ಮೇಲೆ ಗುಂಡಿನ ದಾಳಿ ನಡೆಸಿದ್ದು, ಸಮೀಪದ ಮನೆಯೊಂದರಲ್ಲಿ ಅವಿತಿದ್ದಾರೆ. ಉಗ್ರರಿಂದ  ಗುಂಡಿನ ದಾಳಿ ಆರಂಭವಾಗುತ್ತಿದ್ದಂತೆಯೇ ಉಗ್ರರು ಅವಿತಿರುವ ಮನೆಯನ್ನು ಭದ್ರತಾ ಅಧಿಕಾರಿಗಳು ಸುತ್ತುವರೆದಿದ್ದು, ಘಟನಾ ಪ್ರದೇಶದಲ್ಲಿ ತೀವ್ರ ಗುಂಡಿನ ಚಕಮಕಿ ನಡೆಯುತ್ತಿದೆ.

ಕಳೆದ ಶುಕ್ರವಾರವಷ್ಟೇ ಢಾಕಾದ ಹೋಲಿ ಆರ್ಟಿಸನ್ ರೆಸ್ಟೋರೆಂಟ್ ಮೇಲೆ ನಡೆದ ಉಗ್ರ ದಾಳಿಯಲ್ಲಿ ಓರ್ವ ಭಾರತೀಯ ಯುವತಿ ಸೇರಿದಂತೆ 22 ಮಂದಿ ಸಾವನ್ನಪ್ಪಿದ್ದರು.

ಹೆಚ್ಚಿನ ಮಾಹಿತಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com