ದಕ್ಷಿಣ ಆಫ್ರಿಕಾ ತಲುಪಿದ ಪ್ರಧಾನಿ ಮೋದಿ: ಅಧ್ಯಕ್ಷ ಜಾಕೋಬ್ ಜೂಮಾರೊಂದಿಗೆ ದ್ವಿಪಕ್ಷೀಯ ಮಾತುಕತೆ

ಆಫ್ರಿಕಾ ರಾಷ್ಟ್ರಗಳ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಮೊಜಾಂಬಿಕ್ ದೇಶದ ಪ್ರವಾಸವನ್ನು ಯಶಸ್ವಿಗೊಳಿಸಿ ದಕ್ಷಿಣ ಆಫ್ರಿಕಾಗೆ ತಲುಪಿದ್ದಾರೆ.
ದಕ್ಷಿಣ ಆಫ್ರಿಕಾ ತಲುಪಿದ ಪ್ರಧಾನಿ ಮೋದಿ
ದಕ್ಷಿಣ ಆಫ್ರಿಕಾ ತಲುಪಿದ ಪ್ರಧಾನಿ ಮೋದಿ
Updated on: 

ಪ್ರಿಟೋರಿಯಾ: ಆಫ್ರಿಕಾ ರಾಷ್ಟ್ರಗಳ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಮೊಜಾಂಬಿಕ್ ದೇಶದ ಪ್ರವಾಸವನ್ನು ಯಶಸ್ವಿಗೊಳಿಸಿ ದಕ್ಷಿಣ ಆಫ್ರಿಕಾಗೆ ತಲುಪಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು ದಕ್ಷಿಣ ಆಫ್ರಿಕಾಗೆ ತಲುಪಿದ್ದಾರೆ ಎಂದು ಪ್ರಧಾನಿ ಕಾರ್ಯಾಲಯದ ಅಧಿಕಾರಿಗಳು ಟ್ವೀಟ್ ಮಾಡಿದ್ದಾರೆ. ದಕ್ಷಿಣ ಆಫ್ರಿಕಾದ ವಿದೇಶಾಂಗ ಇಲಾಖೆ ಸಚಿವ ಕೊನಾ-ಮಶಬಾನೆ ಹಾಗೂ ಉದ್ಯಮ ಸಚಿವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ್ದಾರೆ.

ಜುಲೈ.8 ರಂದು ಪ್ರಧಾನಿ ನರೇಂದ್ರ ಮೋದಿ ದಕ್ಷಿಣ ಆಫ್ರಿಕಾದ ಅಧ್ಯಕ್ಷ ಜಾಕೋಬ್ ಜೂಮಾ ಅವರೊಂದಿಗೆ ದ್ವಿಪಕ್ಷೀಯ ಮಾತುಕತೆ ನಡೆಸಲಿದ್ದು, ನಂತರ ಭಾರತ-ದಕ್ಷಿಣ ಆಫ್ರಿಕಾದ ಉದ್ಯಮಿಗಳ ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ. ಇದಾದ ಬಳಿಕ ಪ್ರಧಾನಿ ಮೋದಿ  ಜೋಹಾನ್ಸ್ಬರ್ಗ್ ನಲ್ಲಿರುವ ಕಾನ್ಸ್ಟಿಟ್ಯೂಶನ್ ಹಿಲ್ ಹಾಗೂ ನೆಲ್ಸನ್ ಮಂಡೇಲಾ ಫೌಂಡೇಶನ್ ಗೆ ಭೇಟಿ ನೀಡುವ ಕಾರ್ಯಕ್ರಮಗಳು ನಿಗದಿಯಾಗಿವೆ. ದಿನದ ಅಂತ್ಯದಲ್ಲಿ ದಕ್ಷಿಣ ಆಫ್ರಿಕಾದ ಭಾರತೀಯ ಸಮುದಾಯವನ್ನುದ್ದೇಶಿಸಿ ಮಾತನಾಡಲಿರುವ ಪ್ರಧಾನಿ ಮೋದಿ ನಂತರ ಡರ್ಬನ್ ಗೆ ತೆರಳಲಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com