ಆಫ್ರಿಕಾದ ನಾಲ್ಕು ದೇಶಗಳ ಪ್ರವಾಸದಲ್ಲಿರುವ ಮೋದಿ ಅವರು ಮೊಜಾಂಬಿಕ್ ದೇಶದ ಪ್ರವಾಸವನ್ನು ಯಶಸ್ವಿಗೊಳಿಸಿ ಇಂದು ದಕ್ಷಿಣ ಆಫ್ರಿಕ ತಲುಪಿದ್ದಾರೆ. ದಕ್ಷಿಣ ಆಫ್ರಿಕ ಅಧ್ಯಕ್ಷ ಜೇಕಬ್ ಝುಮಾ ಅವರೊಂದಿಗೆ ದ್ವಿಪಕ್ಷೀಯ ಮಾತುಕತೆ ನಡೆಸಿದ ನಂತರ ಜಂಟಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಮೋದಿ, ಭಯೋತ್ಪಾದನೆ ವಿರುದ್ಧ ಸಕ್ರಿಯವಾಗಿ ಹೋರಾಡಲು, ಸಹಕರಿಸಲು ಮತ್ತು ಬಹುಪಕ್ಷೀಯ ವೇದಿಕೆಗಳಲ್ಲಿ ಸಮಸ್ಯೆಗಳನ್ನು ನಿಭಾಯಿಸಲು ಉಭಯ ದೇಶಗಳು ನಿರ್ಧರಿಸಿವೆ ಎಂದರು.