ಉತ್ತರ ಕೊರಿಯಾ ಖಂಡಾಂತರ ಕ್ಷಿಪಣಿ ಪರೀಕ್ಷೆ ನಡೆಸಿದೆ: ದಕ್ಷಿಣ ಕೊರಿಯಾ

ಉತ್ತರ ಕೊರಿಯಾ ಜಲಾಂತರ್ಗಾಮಿ ನೌಕೆಯ ಮೂಲಕ ಉಡಾಯಿಸಬಹುದಾದ ಖಂಡಾಂತರ ಕ್ಷಿಪಣಿ ಪರೀಕ್ಷೆಯನ್ನು ಬೆಳಗ್ಗೆ 11.30ರ ಸುಮಾರಿನಲ್ಲಿ ನಡೆಸಿದೆ ಎಂದು ದಕ್ಷಿಣ...
ಖಂಡಾಂತರ ಕ್ಷಿಪಣಿ
ಖಂಡಾಂತರ ಕ್ಷಿಪಣಿ

ಸಿಯೋಲ್: ಉತ್ತರ ಕೊರಿಯಾ ಜಲಾಂತರ್ಗಾಮಿ ನೌಕೆಯ ಮೂಲಕ ಉಡಾಯಿಸಬಹುದಾದ ಖಂಡಾಂತರ ಕ್ಷಿಪಣಿ ಪರೀಕ್ಷೆಯನ್ನು ಬೆಳಗ್ಗೆ 11.30ರ ಸುಮಾರಿನಲ್ಲಿ ನಡೆಸಿದೆ ಎಂದು ದಕ್ಷಿಣ ಕೊರಿಯಾದ ಅಧಿಕಾರಿಗಳು ತಿಳಿಸಿದ್ದಾರೆ.

ಉತ್ತರ ಕೊರಿಯಾದ ಪೂರ್ವ ಕರಾವಳಿಯಲ್ಲಿ ಖಂಡಾಂತರ ಕ್ಷಿಪಣಿಯ ಪರೀಕ್ಷೆ ನಡೆಸಿದೆ. ಈ ಕ್ಷಿಪಣಿ ಎಷ್ಟು ದೂರ ಹಾರಿದೆ ಮತ್ತು ಎಲ್ಲಿ ಗುರಿ ಮುಟ್ಟಿದೆ ಎಂಬ ಕುರಿತು ಸ್ಪಷ್ಟವಾದ ಮಾಹಿತಿ ಇನ್ನು ಲಭ್ಯವಾಗಿಲ್ಲ ಎಂದು ದಕ್ಷಿಣ ಕೊರಿಯಾದ ರಕ್ಷಣಾ ಸಚಿವಾಲಯದ ಅಧಿಕಾರಿಗಳು ತಿಳಿಸಿದ್ದಾರೆ.

ಜಲಾಂತರ್ಗಾಮಿ ನೌಕೆಯಿಂದ ಉಡಾಯಿಸಬಹುದಾದ ಕ್ಷಿಪಣಿ ತಂತ್ರಜ್ಞಾನವನ್ನು ಉತ್ತರ ಕೊರಿಯಾ ಅಭಿವೃದ್ಧಿಪಡಿಸಿರುವುದು ಚಿಂತಿಸಬೇಕಾದ ವಿಷಯ. ಸಮುದ್ರದೊಳಗೆ ಸಂಚರಿಸುವ ಜಲಾಂತರ್ಗಾಮಿ ನೌಕೆಗಳನ್ನು ಪತ್ತೆ ಹಚ್ಚುವುದು ಸುಲಭದ ಕೆಲಸವಲ್ಲ ಹೀಗಾಗಿ ಇದು ನೆರೆಹೊರೆಯ ರಾಷ್ಟ್ರಗಳ ಭದ್ರತೆಗೆ ಭಾರೀ ಧಕ್ಕೆಯಾಗಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.


ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com