ಸೈನಿಕರು ಅಂಕರದಲ್ಲಿರುವ ಸಂಸತ್ ಭವನದ ಮೇಲೆ ಬಾಂಬ್ ದಾಳಿ ನಡೆಸಿದ್ದಾರೆ, ಜತೆಗೆ ಸಂಸತ್ ಭವನದ ಬಳಿ ಗುಂಡಿನ ದಾಳಿ ನಡೆಸುತ್ತಿದ್ದಾರೆ. ಸಂಸತ್ ಭವನದ ಮೇಲೆ ನಡೆದ ಬಾಂಬ್ ದಾಳಿಯಲ್ಲಿ ಹಲವು ಅಧಿಕಾರಿಗಳು ಗಾಯಗೊಂಡಿದ್ದಾರೆ. ಇಸ್ತಾಂಬುಲ್ನ ಬಾಸ್ಪೋರಸ್ ಸೇತುವೆಯನ್ನು ಸೇನೆ ವಶಕ್ಕೆ ಪಡೆದಿದ್ದು, ಈ ಪ್ರದೇಶದಲ್ಲಿ ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ಟರ್ಕಿ ಅಧ್ಯಕ್ಷರ ಅರಮನೆಯ ಬಳಿ ಸಹ ಸೇನಾ ಪಡೆಯ ಯುದ್ಧ ವಿಮಾನಗಳು ಬಾಂಬ್ ದಾಳಿ ನಡೆಸಿವೆ.