
ಮ್ಯೂನಿಚ್: ಜರ್ಮನಿಯ ಮ್ಯೂನಿಚ್ ನಗರದ ಮಾಲ್ ವೊಂದರ ಮೇಲೆ ಬಂದೂಕುದಾರಿಯೊಬ್ಬ ನಡೆಸಿದ ಗುಂಡಿನ ದಾಳಿಯಲ್ಲಿ 9 ಮಂದಿ ಸಾರ್ವಜನಿಕರು ಮೃತಪಟ್ಟಿದ್ದಾರೆ. ಬಂದೂಕುದಾರಿ ಸಹ ಗುಂಡು ಹಾರಿಸಿಕೊಂಡು ಮೃತಪಟ್ಟಿರುವುದಾಗಿ ಪೊಲೀಸರು ಸ್ಪಷ್ಟಪಡಿಸಿದ್ದಾರೆ.
ಸಿಟಿ ಒಲಿಂಪಿಕ್ ಪಾರ್ಕ್ ಗೆ ಸ್ಥಳೀಯ ಕಾಲಮಾನ ಸಂಜೆ 5.50 ಸುಮಾರಿಗೆ ನುಗ್ಗಿದ ಶಸ್ತ್ರಸಜ್ಜಿತ ಶಂಕಿತ ಉಗ್ರನೊಬ್ಬ ಏಕಾಏಕಿ ಗುಂಡಿನ ದಾಳಿ ನಡೆಸಿದ್ದಾನೆ ಪರಿಣಾಮ 9 ಮಂದಿ ಮೃತಪಟ್ಟಿದ್ದಾರೆ. ಇನ್ನು ಪೊಲೀಸರು ಸೇರಿ 10ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ.
ಇನ್ನು ಮಾಲ್ ನಲ್ಲಿ ಗುಂಡಿನ ದಾಳಿ ವಿಷಯ ತಿಳಿಯುತ್ತಿದ್ದಂತೆ ಪೊಲೀಸರು ಮಾಲ್ ಅನ್ನು ಸುತ್ತುವರೆದು ಕಾರ್ಯಾಚರಣೆ ಕೈಗೊಂಡಿದ್ದರು. ನಂತರ ಮಾಲ್ ಪ್ರವೇಶಿಸಿದ ಪೊಲೀಸರಿಗೆ ಗುಂಡಿನ ದಾಳಿಯಲ್ಲಿ 9 ಮಂದಿ ಸಾರ್ವಜನಿಕರು ಹಾಗೂ ಬಂದೂಕುದಾರಿ ರಕ್ತದ ಮಡುವಿನಲ್ಲಿ ಬಿದ್ದಿರುವುದನ್ನು ನೋಡಿದ್ದಾರೆ.
ಮತ್ತೊಂದೆಡೆ ಒಲಿಂಪಿಕ್ ಮಾಲ್ ಸಮೀಪದ ಮೆಟ್ರೋ ರೈಲು ನಿಲ್ದಾಣದಲ್ಲೂ ಗುಂಡಿನ ದಾಳಿ ನಡೆದಿದ್ದು, ಅಲ್ಲೂ ಉಗ್ರರು ಅಡಗಿ ಕುಳಿತ್ತಿದ್ದಾರೆ ಎನ್ನಲಾಗಿದೆ.
Advertisement