61 ಜನರ ಬಲಿ ಪಡೆದ ಕಾಬೂಲ್ ಅವಳಿ ಆತ್ಮಾಹುತಿ ಬಾಂಬ್ ಸ್ಫೋಟದ ಹೊಣೆ ಹೊತ್ತ ಐಎಸ್ಐಎಸ್

ಐಎಸ್ಐಎಸ್ ಉಗ್ರ ಸಂಘಟನೆ ಶನಿವಾರ 61ಕ್ಕೂ ಹೆಚ್ಚು ಜನರನ್ನು ಬಲಿ ಪಡೆದ ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್ ನ ಅವಳಿ...
ಸ್ಫೋಟ ನಡೆದ ಸ್ಥಳ
ಸ್ಫೋಟ ನಡೆದ ಸ್ಥಳ
ಕಾಬೂಲ್: ಐಎಸ್ಐಎಸ್ ಉಗ್ರ ಸಂಘಟನೆ ಶನಿವಾರ 61ಕ್ಕೂ ಹೆಚ್ಚು ಜನರನ್ನು ಬಲಿ ಪಡೆದ ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್ ನ ಅವಳಿ ಆತ್ಮಾಹುತಿ ಬಾಂಬ್ ಸ್ಫೋಟದ ಹೊಣೆ ಹೊತ್ತುಕೊಂಡಿದೆ. 
ಇಸ್ಲಾಮಿಕ್ ಸ್ಟೇಟ್ ಕಾಬುಲ್ ನ ಶಿಯಾ ಹಜಾರಸ್ ಸಮುದಾಯದವರ ಮೇಲೆ ನಡೆಸಿದ ಅವಳಿ ಬಾಂಬ್ ಸ್ಫೋಟದ ಹೊಣೆ ಹೊತ್ತುಕೊಂಡಿರುವುದಾಗಿ ಅಮಖ್ ಸುದ್ದಿಸಂಸ್ಥೆ ಹೇಳಿದೆ.
ಕಾಬುಲ್ ನ ದೆಹ್ ಮೆಜಂಗ್ ಸರ್ಕಲ್ ನಲ್ಲಿ ವಿದ್ಯುತ್ ಸಂಪರ್ಕದ ಮಾರ್ಗ ಬದಲಾವಣೆವೆ ಒತ್ತಾಯಿಸಿ ಸಾವಿರಾರು ಜನ ಪ್ರತಿಭಟನೆ ನಡೆಸುತ್ತಿದ್ದ ಸಂದರ್ಭದಲ್ಲಿಯೇ ಈ ಅವಳಿ ಬಾಂಬ್ ಸ್ಫೋಟಗೊಂಡಿದ್ದು, ಸ್ಫೋಟದಲ್ಲಿ 61 ಮಂದಿ ಮೃತಪಟ್ಟಿರುವುದಾಗಿ ಮತ್ತು 200ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವುದಾಗಿ ಅಫ್ಘಾನ್ ಅಧಿಕಾರಿಗಳು ಖಚಿತಪಡಿಸಿದ್ದಾರೆ.
ಪ್ರತ್ಯಕ್ಷದರ್ಶಿಗಳ ಪ್ರಾಥಮಿಕ ಹೇಳಿಕೆ ಪ್ರಕಾರ ಪ್ರತಿಭಟನಾಕಾರರ ಸಮ್ಮುಖದಲ್ಲಿ ಬುರ್ಖಾ ಧರಿಸಿದ್ದ ಬಾಂಬರ್ ತನ್ನನ್ನು ತಾನು ಸ್ಫೋಟಿಸಿಕೊಂಡಿರುವುದಾಗಿ ವಿವರಿಸಿದ್ದಾರೆ.
ತಮ್ಮ ಪ್ರಾಂತ್ಯದ ಮೂಲಕ ಹಾದು ಹೋಗುವ ವಿದ್ಯುತ್ ಮಾರ್ಗವನ್ನು ಬದಲಿಸಿದ ಹಿನ್ನೆಲೆಯಲ್ಲಿ ಸಮುದಾಯದ ಸಾವಿರಾರು ಜನರು ಶನಿವಾರ ಕಾಬೂಲ್​ನಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸುತ್ತಿದ್ದರು. ಪ್ರತಿಭಟನಾಕಾರರು ಆಫ್ಘನ್ ಅಧ್ಯಕ್ಷ ಅಶ್ರಫ್ ಘನಿ ವಿರುದ್ಧ ಘೊಷಣೆ ಕೂಗಿ ತಮ್ಮ ಆಕ್ರೋಶ ವ್ಯಕ್ತಪಡಿಸುತ್ತಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com