
ಮ್ಯೂನಿಚ್: ಜರ್ಮನಿಯ ಮ್ಯೂನಿಚ್ ನಗರದ ಮಾಲ್ ಮುಂದೆ ಬಂಧೂಕುದಾರಿಯೊಬ್ಬ ನಡೆಸಿದ ಗುಂಡಿನ ದಾಳಿಯ ದೃಶ್ಯವನ್ನು ಅಲ್ಲಿನ ಸ್ಥಳೀಯರೊಬ್ಬರು ಕ್ಯಾಮರಾದಲ್ಲಿ ಸೆರೆಹಿಡಿದಿದ್ದಾರೆ. ಗನ್ ಹಿಡಿದ ವ್ಯಕ್ತಿಯೊಬ್ಬ ಮಾಲ್ ಮುಂದೆ ನಿಂತು ಏಕಾಏಕಿ ಗುಂಡುಹಾರಿಸಿದ್ದಾನೆ. ವ್ಯಕ್ತಿ ಗುಂಡು ಹಾರಿಸುತ್ತಿದ್ದಂತೆ ಅಲ್ಲಿದ್ದ ಸಾರ್ವಜನಿಕರು ಪ್ರಾಣ ಭಯದಿಂದ ಓಡಿದ್ದಾರೆ. ಈ ಗುಂಡಿನ ದಾಳಿಯಲ್ಲಿ 9 ಮಂದಿ ಸಾರ್ವಜನಿಕರು ತಮ್ಮ ಪ್ರಾಣವನ್ನು ಕಳೆದುಕೊಂಡಿದ್ದಾರೆ. ಕೊನೆಗೆ ಬಂಧೂಕುದಾರಿಯು ಸಹ ಗುಂಡು ಹಾರಿಸಿಕೊಂಡು ಮೃತಪಟ್ಟಿದ್ದಾನೆ. ಈ ವಿಡಿಯೋವನ್ನು ಟ್ವಿಟರ್ ನಲ್ಲಿ ಹಂಚಿಕೊಳ್ಳಲಾಗಿದೆ.
Advertisement