
ನವದೆಹಲಿ: ಜರ್ಮನಿಯ ಮ್ಯೂನಿಚ್ ನಗರದ ಮಾಲ್ ನಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಭಾರತೀಯರಿಗೆ ಯಾವುದೇ ಅಪಾಯ ಸಂಭವಿಸಿಲ್ಲ ಎಂದು ವಿದೇಶಾಂಗ ಇಲಾಖೆ ಸಚಿವೆ ಸುಶ್ಮಾ ಸ್ವರಾಜ್ ಸ್ಪಷ್ಟಪಡಿಸಿದ್ದಾರೆ.
" ಜರ್ಮನಿಯಲ್ಲಿರುವ ಭಾರತೀಯ ರಾಯಭಾರಿ ಗುರ್ಜಿತ್ ಸಿಂಗ್ ಅವರೊಂದಿಗೆ ಮಾತನಾಡಿದ್ದೇನೆ, ಮ್ಯೂನಿಚ್ ನಗರದಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಭಾರತೀಯರಿಗೆ ಯಾವುದೇ ಅಪಾಯ ಸಂಭವಿಸಿಲ್ಲ ಎಂದು ತಿಳಿಸಿದ್ದಾರೆ" ಎಂದು ಸುಷ್ಮಾ ಸ್ವರಾಜ್ ಟ್ವೀಟ್ ಮಾಡಿದ್ದಾರೆ.
ಮ್ಯೂನಿಚ್ ನಗರದಲ್ಲಿರುವ ಭಾರತೀಯರು ಸುರಕ್ಷಿತರಾಗಿದ್ದಾರೆ, ಒಂದು ವೇಳೆ ಏನೇ ಅಪಾಯ ಎದುರಾದರೂ ದೂತಾವಾಸ ಕಚೇರಿಯನ್ನು ಸಂಪರ್ಕಿಸುವಂತೆ ಸೂಚಿಸಲಾಗಿದೆ ಎಂದು ಗುರ್ಜಿತ್ ಸಿಂಗ್ ಸುಷ್ಮಾ ಸ್ವರಾಜ್ ಗೆ ಮಾಹಿತಿ ನೀಡಿದ್ದಾರೆ. ಸಿಟಿ ಒಲಿಂಪಿಕ್ ಪಾರ್ಕ್ ಗೆ ಸ್ಥಳೀಯ ಕಾಲಮಾನ ಸಂಜೆ 5.50 ಸುಮಾರಿಗೆ ನುಗ್ಗಿದ ಶಸ್ತ್ರಸಜ್ಜಿತ ಶಂಕಿತ ಉಗ್ರನೊಬ್ಬ ಏಕಾಏಕಿ ಗುಂಡಿನ ದಾಳಿ ನಡೆಸಿದ್ದಾನೆ ಪರಿಣಾಮ 9 ಮಂದಿ ಮೃತಪಟ್ಟಿದ್ದಾರೆ. ಮತ್ತೊಂದೆಡೆ ಒಲಿಂಪಿಕ್ ಮಾಲ್ ಸಮೀಪದ ಮೆಟ್ರೋ ರೈಲು ನಿಲ್ದಾಣದಲ್ಲೂ ಗುಂಡಿನ ದಾಳಿ ನಡೆದಿದ್ದು, ಅಲ್ಲೂ ಉಗ್ರರು ಅಡಗಿ ಕುಳಿತ್ತಿದ್ದಾರೆ ಎನ್ನಲಾಗಿದೆ.
Advertisement