ಢಾಕಾ: ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಮಂಗಳವಾರ ಪೊಲೀಸರು ನಡೆಸಿದ ದಾಳಿಯಲ್ಲಿ 9 ಶಂಕಿತ ಉಗ್ರರನ್ನು ಹತ್ಯೆಗೈಯ್ಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ದಾಳಿಯಲ್ಲಿ ಕೆಲವು ಉಗ್ರರನ್ನು ಬಂಧಿಸಲಾಗಿದ್ದು, ಸ್ಫೋಟಕಗಳು, ಗ್ರೆನೇಡ್ ಗಳನ್ನೂ ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿರುವುದಾಗಿ ಮಾಧ್ಯಮವೊಂದು ವರದಿ ಮಾಡಿದೆ.
ನಗರದ ಕಲ್ಯಾಣಪುರ ಪ್ರದೇಶದ ಅಡಗುತಾಣವೊಂದರ ಮೇಲೆ ಬೆಳಗ್ಗೆ ಸುಮಾರು 5:30 ಕ್ಕೆ ದಾಳಿ ಮಾಡಿದ ಪೊಲೀಸರು ಮತ್ತು ರ್ಯಾಪಿಡ್ ಆಕ್ಷನ್ ಬೆಟಾಲಿಯನ್ ಪಡೆಯ ಮೇಲೆ ಉಗ್ರರು ಗ್ರೆನೇಡ್ ಎಸೆದಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಈ ದಾಳಿಯಲ್ಲಿ ಸಂಪರ್ಕ ಸಾಧನಗಳು ಮತ್ತು ಜಿಹಾದಿ ಪುಸ್ತಕಗಳನ್ನು ಕೂಡ ವಶಪಡಿಸಿಕೊಳ್ಳಲಾಗಿದೆ.