
ವಾಷಿಂಗ್ ಟನ್: ಪ್ರಧಾನಿ ನರೇಂದ್ರ ಮೋದಿ ಮುಂದಿನ ವಾರ ಅಮೆರಿಕಗೆ ಭೇಟಿ ನೀಡಲಿದ್ದು, ಇದಕ್ಕೂ ಮುನ್ನ ಅಮೆರಿಕ ಅಧಿಕಾರಿಗಳು ಭಾರತ-ಅಮೆರಿಕ ದ್ವಿಪಕ್ಷೀಯ ಸಂಬಂಧ ಜಾಗತಿಕ ಮಟ್ಟದಲ್ಲಿ ಮಹತ್ವ ಪಡೆದಿದೆ ಎಂದು ಬಣ್ಣಿಸಿದ್ದಾರೆ.
ಉಭಯ ದೇಶಗಳ ಸಂಬಂಧ ಪ್ರಾದೇಶಿಕವಾಗಿಯಷ್ಟೇ ಅಲ್ಲದೆ ಜಾಗತಿಕವಾಗಿಯೂ ವಿಶೇಷವಾದ ಮಹತ್ವ ಪಡೆದುಕೊಂಡಿದೆ ಎಂದು ಅಮೆರಿಕ ಅಧಿಕಾರಿ ಮಾರ್ಕ್ ಟೋನರ್ ತಿಳಿಸಿದ್ದಾರೆ. ಭಾರತದೊಂದಿಗೆ ಅಮೆರಿಕ ವಿಶಾಲ ದ್ವಿಪಕ್ಷೀಯ ಸಂಬಂಧ ಹೊಂದಿದ್ದು ಅದನ್ನು ಮತ್ತಷ್ಟು ಎತ್ತರಕ್ಕೆ ಕೊಂಡೊಯ್ಯಲಿದ್ದೇವೆ ಎಂದು ಮಾರ್ಕ್ ಟೋನರ್ ಪ್ರಧಾನಿ ನರೇಂದ್ರ ಮೋದಿ ಅವರ ಭೇಟಿ ಅಂಗವಾಗಿ ಮಾಧ್ಯಮಗಳಿಗೆ ನೀಡಿರುವ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಜೂ.7 -8 ರಂದು ಪ್ರಧಾನಿ ನರೇಂದ್ರ ಮೋದಿ ಅಮೆರಿಕಾಗೆ ಭೇಟಿ ನೀಡಲಿದ್ದು ಅಮೆರಿಕ ಕಾಂಗ್ರೆಸ್(ಸಂಸತ್) ನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ.
Advertisement