ಭಾರತದ ಜೊತೆ ಮಾತುಕತೆಗೆ ಆತುರವೇನಿಲ್ಲ: ಪಾಕ್

ಭಾರತದೊಂದಿಗೆ ಶಾಂತಿಯುತ ಮಾತುಕತೆಯನ್ನು ಪ್ರಾರಂಭಿಸಲು ಆತುರವಿಲ್ಲ ಎಂದು ಪಾಕಿಸ್ತಾನದ ಹಿರಿಯ ಅಧಿಕಾರಿ ಸರ್ತಾಜ್ ಅಜೀಜ್ ಹೇಳಿದ್ದಾರೆ.
ಸರ್ತಾಜ್ ಅಜೀಜ್
ಸರ್ತಾಜ್ ಅಜೀಜ್

ಇಸ್ಲಾಮಾಬಾದ್: ಭಾರತದೊಂದಿಗೆ ಶಾಂತಿಯುತ ಮಾತುಕತೆಯನ್ನು ಪ್ರಾರಂಭಿಸಲು ಆತುರವಿಲ್ಲ ಎಂದು ಪಾಕಿಸ್ತಾನದ ಹಿರಿಯ ಅಧಿಕಾರಿ ಸರ್ತಾಜ್ ಅಜೀಜ್ ಹೇಳಿದ್ದಾರೆ.

ದ್ವಿಪಕ್ಷೀಯ ಮಾತುಕತೆಗೆ ಪಾಕ್ ಆತುರವೇನು ಇಲ್ಲ ಎಂದು ಹೇಳಿಕೆ ನೀಡಿದ ಬೆನ್ನಲ್ಲೇ, ದಕ್ಷಿಣ ಏಷ್ಯಾದಲ್ಲಿ ಶಾಂತಿಯುತ ವಾತಾವರಣ ನೆಲೆಸಬೇಕಾದರೆ ಪಾಕಿಸ್ತಾನ- ಭಾರತದ ನಡುವೆ ದ್ವಿಪಕ್ಷೀಯ ಮಾತುಕತೆ ಪ್ರಾರಂಭವಾಗಬೇಕು ಎಂದು ಸರ್ತಾಜ್ ಅಜೀಜ್ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಈ ಬಾರಿಯೂ ಭಾರತದ ವಿರುದ್ಧ ಆರೋಪ ಮಾಡಿರುವ ಸರ್ತಾಜ್ ಅಜೀಜ್, ಪಾಕಿಸ್ತಾನದೊಂದಿಗೆ ಸೌಹಾರ್ದಯುತ ಸಂಬಂಧ ಬೆಳೆಸಲು ಹಾಗೂ ದ್ವಿಪಕ್ಷೀಯ ಮಾತುಕತೆಗೆ ಭಾರತ ಎಂದಿಗೂ ಅವಕಾಶ ನೀಡಿಲ್ಲ ಎಂದು ಹೇಳಿರುವುದನ್ನು ಡಾನ್ ಪತ್ರಿಕೆ ವರದಿ ಮಾಡಿದೆ.

ಪಠಾಣ್ ಕೋಟ್ ನಲ್ಲಿ ನಡೆದ ಭಯೋತ್ಪಾದಕ ದಾಳಿ ನಂತರ ಭಾರತ-ಪಾಕಿಸ್ತಾನದ ನಡುವಿನ ಮಾತುಕತೆ ಸ್ಥಗಿತಗೊಂಡಿದೆ. ಉಭಯ ದೇಶಗಳ ನಡುವೆ ದ್ವಿಪಕ್ಷೀಯ ಮಾತುಕತೆಯನ್ನು ಪುನಾರಂಭ ಮಾಡಲು 2015 ರ ಡಿಸೆಂಬರ್ 9 ರಂದು ನಿರ್ಧರಿಸಲಾಗಿತ್ತು. ಆದರೆ  ಪಠಾಣ್ ಕೋಟ್ ದಾಳಿಯಿಂದ ಎಲ್ಲವೂ ಹಾಳಾಯಿತು ಎಂದು ಸರ್ತಾಜ್ ಅಜೀಜ್ ಹೇಳಿದ್ದಾರೆ.

ಭಯೋತ್ಪಾದನೆ ನಿರ್ಮೂಲನೆ ವಿಷಯದಲ್ಲಿ ಪಾಕಿಸ್ತಾನ ಪ್ರಗತಿ ಸಾಧಿಸಿದರೆ ಮಾತುಕತೆ ನಡೆಸಲು ಉತ್ತಮ ವಾತಾವರಣ ನಿರ್ಮಾಣವಾಗಲಿದೆ ಎಂದು ಭಾರತ ಹೇಳುತ್ತದೆ. ಆದರೆ ನಾವು ಕಾಶ್ಮೀರ ವಿಷಯವನ್ನೂ ಮಾತುಕತೆಯಲ್ಲಿ ಚರ್ಚಿಸಬೇಕು ಎಂಬುದು ಪಾಕಿಸ್ತಾನದ ಬೇಡಿಕೆ ಎಂದು ಸರ್ತಾಜ್ ಅಜೀಜ್ ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com