ವಿದೇಶ

ಭಾರತದ ಎನ್ಎಸ್ ಜಿ ಸದಸ್ಯತ್ವಕ್ಕೆ 'ಖಂಡಿತ ಬೆಂಬಲ': ಮೋದಿಗೆ ಕ್ಯಾಮರೂನ್ ಅಭಯ

ಭಾರತದ ಎನ್ ಎಸ್ ಜಿ ಸದಸ್ಯತ್ವಕ್ಕೆ ಬ್ರಿಟನ್ ಖಂಡಿತ ಬೆಂಬಲ ನೀಡುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬ್ರಿಟನ್ ಪ್ರಧಾನಿ...

ಭಾರತದ ಎನ್ಎಸ್ ಜಿ ಸದಸ್ಯತ್ವಕ್ಕೆ 'ಖಂಡಿತ ಬೆಂಬಲ': ಮೋದಿಗೆ ಕ್ಯಾಮರೂನ್ ಅಭಯ
ಪ್ರಧಾನಿ ಮೋದಿ - ಡೇವಿಡ್ ಕ್ಯಾಮರೂನ್
Published On :
ಲಂಡನ್: ಭಾರತದ ಎನ್ ಎಸ್ ಜಿ ಸದಸ್ಯತ್ವಕ್ಕೆ ಬ್ರಿಟನ್ ಖಂಡಿತ ಬೆಂಬಲ ನೀಡುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬ್ರಿಟನ್ ಪ್ರಧಾನಿ ಡೇವಿಡ್ ಕ್ಯಾಮರೂನ್ ಅವರು ಭರವಸೆ ನೀಡಿದ್ದಾರೆ.
ಮುಂದಿನ ವಾರ ನಡೆಯಲಿರುವ 48 ಪರಮಾಣು ಪೂರೈಕೆದಾರರ ಸಮೂಹ(ಎನ್ಎಸ್ ಜಿ)ದ ಸರ್ವಸದಸ್ಯರ ಸಭೆಯಲ್ಲಿ ಭಾರತದ ಸದಸ್ಯತ್ವಕ್ಕೆ ಬೆಂಬಲ ನೀಡುವುದಾಗಿ ಕ್ಯಾಮರೂನ್ ಅವರು ದೂರವಾಣಿ ಮೂಲಕ ಪ್ರಧಾನಿ ಮೋದಿ ಅವರಿಗೆ ಗುರುವಾರ ಖಚಿತಪಡಿಸಿದ್ದಾರೆ.
ಎನ್ಎಸ್ ಜಿ ಸದಸ್ಯತ್ವಕ್ಕೆ ಸಂಬಂಧಿಸಿದಂತೆ ಪ್ರಧಾನಿ ಡೇವಿಡ್ ಕ್ಯಾಮರೂನ್ ಅವರು ಭಾರತದ ಪ್ರಧಾನಿಯೊಂದಿಗೆ ದೂರವಾಣಿ ಮೂಲಕ ಮಾತನಾಡಿದ್ದು, ಬೆಂಬಲ ನೀಡುವುದಾಗಿ ಖಚಿತಪಡಿಸಿದ್ದಾರೆ ಎಂದು ಡೌನಿಂಗ್ ಸ್ಟ್ರೀಟ್ ವಕ್ತಾರರೊಬ್ಬರು ತಿಳಿಸಿದ್ದಾರೆ.
ಇನ್ನು ಅಮೆರಿಕ ಸಹ ಭಾರತದ ಅರ್ಜಿಗೆ ಬೆಂಬಲ ನೀಡಬೇಕೆಂದು ಎಲ್ಲಾ 48 ಸದಸ್ಯ ರಾಷ್ಟ್ರಗಳಿಗೂ ಒತ್ತಾಯಿಸಿದೆ. ಕಳೆದ ವಾರ ಪ್ರಧಾನಿ ನರೇಂದ್ರ ಮೋದಿ ಅಮೆರಿಕಾಗೆ ಭೇಟಿ ನೀಡಿದ್ದಾಗಲೂ ಅಮೆರಿಕ  ಭಾರತದ ಎನ್ಎಸ್ ಜಿ ಸದಸ್ಯತ್ವಕ್ಕೆ ಬೆಂಬಲ ನೀಡುವುದಾಗಿ ಅಮೆರಿಕ ಅಧ್ಯಕ್ಷ ಬರಾಕ್ ಒಬಾಮ ಸ್ಪಷ್ಟಪಡಿಸಿದ್ದರು. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.