ಅಫ್ಘಾನ್ ಭಾರತೀಯ ರಾಯಭಾರ ಕಚೇರಿ ಮೇಲೆ ದಾಳಿ: 2 ನಾಗರಿಕರು ಸೇರಿ 8 ಸಾವು

ಪೂರ್ವ ಅಫ್ಘಾನಿಸ್ತಾನದ ಜಲಲಬಾದ್ ನಲ್ಲಿರುವ ಭಾರತೀಯ ರಾಯಭಾರ ಕಚೇರಿ ಬಳಿ ಐವರು ಉಗ್ರರು...
ದಾಳಿ ನಡೆದ ಸ್ಥಳ
ದಾಳಿ ನಡೆದ ಸ್ಥಳ
ಜಲಾಲಾಬಾದ್: ಪೂರ್ವ ಅಫ್ಘಾನಿಸ್ತಾನದ ಜಲಲಬಾದ್ ನಲ್ಲಿರುವ ಭಾರತೀಯ ರಾಯಭಾರ ಕಚೇರಿ ಬಳಿ ಐವರು ಉಗ್ರರು ನಡೆಸಿದ ಆತ್ಮಾಹುತಿ ಬಾಂಬ್ ದಾಳಿಯಲ್ಲಿ ಇಬ್ಬರು ನಾಗರಿಕರು ಸೇರಿದಂತೆ ಎಂಟು ಮಂದಿ ಮೃತಪಟ್ಟಿದ್ದಾರೆ.  
ಇಂದು ಮಧ್ಯಾಹ್ನ ಭಾರತೀಯ ರಾಯಭಾರ ಕಚೇರಿಯನ್ನು ಗುರಿಯಾಗಿಸಿಕೊಂಡು ಉಗ್ರರು ಆತ್ಮಾಹುತಿ ಬಾಂಬ್ ದಾಳಿ ನಡೆಸಿದ್ದು, ದಾಳಿಯಲ್ಲಿ ಮಗು ಸೇರಿದಂತೆ 19 ನಾಗರಿಕರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಟೋಲೊ ನ್ಯೂಸ್ ವರದಿ ಮಾಡಿದೆ. 
ಆತ್ಮಾಹುತಿ ಬಾಂಬರ್ ತನ್ನನ್ನು ತಾನು ಸ್ಫೋಟಿಸಿಕೊಂಡಿದ್ದಾನೆ. ಈ ಸಂದರ್ಭದಲ್ಲಿ ಅಫ್ಘಾನ್ ಪಡೆಗಳು ನಡೆಸಿದ ಪ್ರತಿದಾಳಿಗೆ ಐವರು ಉಗ್ರರು ಬಲಿಯಾಗಿದ್ದಾರೆ ಎಂದು ವರದಿ ವಿವರಿಸಿದೆ.
ನಮ್ಮ ದೇಶದ ರಾಯಭಾರಿಗಳನ್ನು ಗುರಿಯಾಗಿರಿಸಿಕೊಂಡು ದಾಳಿ ನಡೆಸಲಾಗಿತ್ತು ಎಂದು ವಿದೇಶಾಂಗ ವ್ಯವಹಾರ ಇಲಾಖೆಯ ವಕ್ತಾರ ವಿಕಾಸ್ ಸ್ವರೂಪ್ ತಿಳಿಸಿದ್ದಾರೆ.
ಇದುವರೆಗೆ ದಾಳಿಯ ಹೊಣೆಯನ್ನು ಯಾವುದೇ ಉಗ್ರಗಾಮಿ ಸಂಘಟನೆ ಹೊತ್ತುಕೊಂಡಿಲ್ಲ. ಕಳೆದ ಜನವರಿಯಲ್ಲಿ ಉತ್ತರ ಆಫ್ಘನ್ ನ ಮಜರ್ -ಇ-ಶರೀಫ್ ನಲ್ಲಿರುವ ಭಾರತೀಯ ರಾಯಭಾರ ಕಚೇರಿಯು ದಾಳಿಗೊಳಗಾಗಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com