ಬಾಗ್ದಾದ್: ಇಸಿಸ್ ಉಗ್ರರಿಂದ ಆತ್ಮಾಹುತಿ ಬಾಂಬ್ ಸ್ಫೋಟ; 60 ಸಾವು

ಇಸ್ಲಾಮಿಕ್ ಸ್ಟೇಟ್ ಉಗ್ರ ಸಂಘಟನೆ ದಕ್ಷಿಣ ಬಾಗ್ದಾದ್​ನ ಹಿಲ್ಲಾ ಪ್ರದೇಶದ ಚೆಕ್​ಪೋಸ್ಟ್ ಬಳಿ ಆತ್ಮಾಹುತಿ ಬಾಂಬರ್ ಕಾರ್ ಬಾಂಬ್ ಸ್ಫೋಟಿಸಿದ ಪರಿಣಾಮ...
ಇಸಿಸ್
ಇಸಿಸ್

ಹಿಲ್ಲಾ: ಇಸ್ಲಾಮಿಕ್ ಸ್ಟೇಟ್ ಉಗ್ರ ಸಂಘಟನೆ ದಕ್ಷಿಣ ಬಾಗ್ದಾದ್​ನ ಹಿಲ್ಲಾ ಪ್ರದೇಶದ ಚೆಕ್​ಪೋಸ್ಟ್ ಬಳಿ ಆತ್ಮಾಹುತಿ ಬಾಂಬರ್ ಕಾರ್ ಬಾಂಬ್ ಸ್ಫೋಟಿಸಿದ ಪರಿಣಾಮ 60 ಮಂದಿ ಮೃತಪಟ್ಟು, 70 ಮಂದಿ ತೀವ್ರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಇರಾಕ್ ರಾಜಧಾನಿ ಬಾಗ್ದಾದ್ ನ ಚೆಕ್​ಪೋಸ್ಟ್​ನ್ನು ಉಗ್ರರು ಗುರಿಯಾಗಿಸಿಕೊಂಡು ದಾಳಿ ನಡೆಸಿದ್ದಾರೆ. ಜನರು ಓಡಾಡುವ ಸಂದರ್ಭದಲ್ಲಿ ಬಾಂಬ್ ಸ್ಫೋಟ ಸಂಭವಿಸಿದೆ. ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವವ ಪೈಕಿ 11 ಜನರ ಸ್ಥಿತಿ ಗಂಭೀರವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com