

ನವದೆಹಲಿ: ರಷ್ಯಾದಲ್ಲಿ ಅಪರಿಚಿತರಿಂದ ಹಲ್ಲೆಗೊಳಗಾಗಿ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಭಾರತೀಯ ಮೆಡಿಕಲ್ ವಿದ್ಯಾರ್ಥಿ ಮೃತಪಟ್ಟಿದ್ದಾರೆ.
ಭಾರತೀಯ ವಿದ್ಯಾರ್ಥಿಯ ಸಾವನ್ನು ಕೇಂದ್ರ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಖಚಿತಪಡಿಸಿದ್ದಾರೆ. " ರಷ್ಯಾದಲ್ಲಿ ಮೆಡಿಕಲ್ ವ್ಯಾಸಂಗ ಮಾಡುತ್ತಿದ್ದ ಶ್ರೀನಗರದ ವಿದ್ಯಾರ್ಥಿ ಯಾಸಿರ್ ಹಲ್ಲೆಗೊಳಗಾಗಿ ಮೃತಪಟ್ಟಿದ್ದಾರೆ ಎಂದು ಸುಷ್ಮಾ ಸ್ವರಾಜ್ ಟ್ವೀಟ್ ಮಾಡಿದ್ದಾರೆ.
ಹಲ್ಲೆಗೊಳಗಾದ ನಂತರ ಯಾಸಿರ್ ತನ್ನ ಬಳಿ ಇದ್ದ ಹಣ, ದಾಖಲೆಗಳೆಲ್ಲವನ್ನೂ ಕಳೆದುಕೊಂಡಿದ್ದರು. ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಷ್ಮಾ ಸ್ವರಾಜ್ ರಷ್ಯಾದಲ್ಲಿರುವ ಭಾರತೀಯ ರಾಯಭಾರಿ ಕಚೇರಿ ಅಧಿಕಾರಿಯೊಂದಿಗೆ ನಿರಂತರ ಸಂಪರ್ಕದಲ್ಲಿದ್ದರು. ಪ್ರಕರಣದ ಬಗ್ಗೆ ರಷ್ಯಾ ಅಧಿಕಾರಿಗಳೊಂದಿಗೆ ಮಾತನಾಡುವುದಾಗಿ ಸುಷ್ಮಾ ಸ್ವರಾಜ್ ತಿಳಿಸಿದ್ದಾರೆ.