ಬೆಲ್ಜಿಯಂ ಮೆಟ್ರೋ ನಿಲ್ದಾಣದಲ್ಲಿ ಮತ್ತೊಂದು ಬಾಂಬ್ ಸ್ಫೋಟ

ಬೆಲ್ಜಿಯಂ ದೇಶದ ರಾಜಧಾನಿ ಬ್ರುಸೆಲ್ಸ್ ನಲ್ಲಿರುವ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 2 ಪ್ರತ್ಯೇಕ ಬಾಂಬ್ ಸ್ಪೋಟ ಸಂಭವಿಸಿದ ಬೆನ್ನಲ್ಲೇ ಇದೀಗ ಮತ್ತೊಂದು ಬಾಂಬ್...
ಬೆಲ್ಜಿಯಂ ವಿಮಾನ ನಿಲ್ದಾಣದಲ್ಲಿ ಸ್ಫೋಟ(ಚಿತ್ರಕೃಪೆ: ಟ್ವಿಟರ್)
ಬೆಲ್ಜಿಯಂ ವಿಮಾನ ನಿಲ್ದಾಣದಲ್ಲಿ ಸ್ಫೋಟ(ಚಿತ್ರಕೃಪೆ: ಟ್ವಿಟರ್)

ಬ್ರುಸೆಲ್ಸ್: ಬೆಲ್ಜಿಯಂ ರಾಜಧಾನಿ ಬ್ರುಸೆಲ್ಸ್ ನಲ್ಲಿರುವ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 2 ಪ್ರತ್ಯೇಕ ಬಾಂಬ್ ಸ್ಫೋಟ ಸಂಭವಿಸಿದ ಬೆನ್ನಲ್ಲೇ ಇದೀಗ ಮತ್ತೊಂದು ಬಾಂಬ್ ಸ್ಫೋಟಗೊಂಡಿರುವುದಾಗಿ ತಿಳಿದುಬಂದಿದೆ.

ಬೆಲ್ಜಿಯಂನ ಬ್ರುಸೆಲ್ಸ್ ಮೆಟ್ರೋ ನಿಲ್ದಾಣದಲ್ಲಿ ಬಾಂಬ್ ಸ್ಫೋಟಗೊಂಡಿರುವುದಾಗಿ ಹೇಳಲಾಗುತ್ತಿದ್ದು, ಇದೀಗ ಅಲ್ಲಿನ ಅಧಿಕಾರಿಗಳು ಮೆಟ್ರೋ ರೈಲ್ವೆ ಸಂಚಾರ, ವಿಮಾನ ಹಾರಾಟಗಳನ್ನು ಸ್ಥಗಿತಗೊಳಿಸಿದ್ದಾರೆಂದು ಹೇಳಲಾಗುತ್ತಿದೆ.

ಮೂಲಗಳ ಪ್ರಕಾರ ಸ್ಫೋಟವೊಂದು ಉಗ್ರರ ದಾಳಿ ಎಂದು ಹೇಳಲಾಗುತ್ತಿದ್ದು, ಈ ಬಗ್ಗೆ ಯಾವುದೇ ಸ್ಪಷ್ಟ ಮಾಹಿತಿಗಳು ಲಭ್ಯವಾಗಿಲ್ಲ. ಇನ್ನು ಬ್ರುಸೆಲ್ಸ್ ಗೆ ಹೋಗಿರುವ ಭಾರತದ ವಿಮಾನಗಳನ್ನು ಸಂಪರ್ಕಿಸಲು ಅಧಿಕಾರಿಗಳು ಯತ್ನಿಸಿದ್ದು, ಭಾರತೀಯ ವಿಮಾನಗಳು ಸುರಕ್ಷಿತವಾಗಿವೆ ಎಂದು ತಿಳಿದುಬಂದಿದೆ.

ಇದರಂತೆ ಬ್ರುಸೆಲ್ಸ್ ನಲ್ಲಿರುವ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಂಭವಿಸಿದ ಬಾಂಬ್ ಸ್ಫೋಟದ ಪರಿಣಾಮ ಈಗಾಗಲೇ ವಿಮಾನ ನಿಲ್ದಾಣಗಳು ಭಾಗಶಃ ನಾಶವಾಗಿದೆ ಎಂದು ಹೇಳಲಾಗುತ್ತಿದೆ. ನಿಲ್ದಾಣವನ್ನು ಸ್ಥಳಾಂತರಿಸಲಾಗುತ್ತಿದ್ದು, ವಿಮಾನ ನಿಲ್ದಾಣಕ್ಕೆ ನಾಗರೀಕರು ಬರಬಾರದು. ಬ್ರುಸೆಲ್ಸ್ ಗೆ ಬರುವ ಎಲ್ಲಾ ವಿಮಾನಗಳನ್ನು ರದ್ದು ಮಾಡಲಾಗಿದೆ ಎಂದು ಅಧಿಕಾರಿಗಳು ಹೇಳಿಕೊಂಡಿದ್ದಾರೆ.

ಮೂಲಗಳ ಪ್ರಕಾರ ಸ್ಫೋಟದಲ್ಲಿ 11 ಮಂದಿ ಗಾಯಗೊಂಡಿದ್ದು, 20 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆಂದು ತಿಳಿದುಬಂದಿದೆ.

ಸುದ್ದಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕಾಗಮಿಸಿರುವ ರಕ್ಷಣಾ ದಳ ಸಿಬ್ಬಂದಿಗಳು ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದು, ನಿಲ್ದಾಣದಲ್ಲಿ ಮತ್ತಷ್ಟು ಜೀವಂತ ಬಾಂಬ್ ಗಳಿರುವ ಕುರಿತು ಶಂಕೆ ವ್ಯಕ್ತವಾಗುತ್ತಿವೆ, ಈ ಬಗ್ಗೆ ಭದ್ರತಾ ಸಿಬ್ಬಂದಿ ಶೋಧ ಕಾರ್ಯದಲ್ಲಿ ತೊಡಗಿದ್ದಾರೆ. ಪ್ರಸ್ತುತ ಗಾಯಾಳುಗಳನ್ನು ಸಮೀಪದ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ತಿಳಿದುಬಂದಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com