ಬಲೂಚಿಸ್ತಾನದಲ್ಲಿ ಭಾರತೀಯ ಗುಪ್ತಚರ ಸಂಸ್ಥೆ 'ರಾ' ಅಧಿಕಾರಿ ಬಂಧನ

ಪಾಕಿಸ್ತಾನದ ನೈರುತ್ಯ ಭಾಗದ ಬಲೂಚಿಸ್ತಾನ್ ಪ್ರಾಂತ್ಯದಲ್ಲಿ ಭಾರತೀಯ ಗುಪ್ತಚರ ಸಂಸ್ಥೆ(ರಾ)ಯ ಅಧಿಕಾರಿಯನ್ನು ಬಂಧಿಸಲಾಗಿದೆ ಎಂದು ಗೃಹ ಸಚಿವ ಮಿರ್...

ಬಲೂಚಿಸ್ತಾನ್: ಪಾಕಿಸ್ತಾನದ ನೈರುತ್ಯ ಭಾಗದ ಬಲೂಚಿಸ್ತಾನ್ ಪ್ರಾಂತ್ಯದಲ್ಲಿ ಭಾರತೀಯ ಗುಪ್ತಚರ ಸಂಸ್ಥೆ(ರಾ)ಯ ಅಧಿಕಾರಿಯನ್ನು ಬಂಧಿಸಲಾಗಿದೆ ಎಂದು ಗೃಹ ಸಚಿವ ಮಿರ್ ಸರ್ಫರಾಜ್ ಬುಕ್ತಿ ಹೇಳಿದ್ದಾರೆ.

ಬಲೂಚಿಸ್ತಾನದಲ್ಲಿ ಭಯೋತ್ಪಾದನೆ ಹೆಚ್ಚಳಕ್ಕೆ ಗುಮ್ಮಕ್ಕು ನೀಡುತ್ತಿದ್ದ ಆರೋಪದ ಮೇಲೆ ಭಾರತೀಯ ನೌಕೆ ಹಾಗೂ ಭಾರತೀಯ ಗುಪ್ತಚರ ಸಂಸ್ಥೆ ಸಂಶೋಧನೆ ಮತ್ತು ವಿಶ್ಲೇಷಣೆ ವಿಂಗ್(ರಾ)ನ ಅಧಿಕಾರಿ ಭೂಷಣ್ ಯಾದವ್ ರನ್ನು ಬಂಧಿಸಲಾಗಿದೆ ಎಂದು ಸಚಿವರು ಹೇಳಿದ್ದಾರೆ.

ಭಾರತೀಯ ಅಧಿಕಾರಿ ಮೇಲೆ ಬಲೂಚಿಸ್ತಾನದಲ್ಲಿ ಭಯೋತ್ಪಾದನೆ ಚಟುವಟಿಕೆಗಳನ್ನು ಪ್ರೋತ್ಸಾಹಿಸುತ್ತಿದ್ದ ಎಂಬ ಶಂಕೆ ಇದ್ದು, ಹೆಚ್ಚಿನ ವಿಚಾರಣೆಗಾಗಿ ಇಸ್ಲಾಮಾಬಾದ್ ಗೆ ಕರೆತರಲಾಗಿದೆ ಎಂದು ಪಾಕಿಸ್ತಾನ ಭದ್ರತಾ ಅಧಿಕಾರಿ ಪತ್ರಿಕೆಯೊಂದಕ್ಕೆ ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com