ಪಠಾಣ್ ಕೋಟ್ ದಾಳಿ: ಭಾರತಕ್ಕೆ ಆಗಮಿಸಿದ ಪಾಕ್ ತನಿಖಾ ತಂಡ

ಪಠಾಣ್ ಕೋಟ್ ವಾಯುನೆಲೆ ಮೇಲಿನ ದಾಳಿ ಪ್ರಕರಣದ ತನಿಖೆ ನಡೆಸಲು ಐವರು ಅಧಿಕಾರಿಗಳನ್ನೊಳಗೊಂಡ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ನವದೆಹಲಿ: ಪಠಾಣ್ ಕೋಟ್ ವಾಯುನೆಲೆ ಮೇಲಿನ ದಾಳಿ ಪ್ರಕರಣದ ತನಿಖೆ ನಡೆಸಲು ಐವರು ಅಧಿಕಾರಿಗಳನ್ನೊಳಗೊಂಡ ಪಾಕಿಸ್ತಾನ ತನಿಖಾ ತಂಡ ಭಾನುವಾರ ಭಾರತಕ್ಕೆ ಆಗಮಿಸಿದೆ.

ಇಂದು ಬೆಳಿಗ್ಗೆ ನವದೆಹಲಿಗೆ ಆಗಮಿಸಿರುವ ಪಾಕಿಸ್ತಾನದ ಜಂಟಿ ತನಿಖಾ ತಂಡ, ಸೋಮವಾರ ಬೆಳಗ್ಗೆ ರಾಷ್ಟ್ರೀಯ ಭದ್ರತಾ ಸಂಸ್ಥೆ(ಎನ್ಐಎ)ಯ ಪ್ರಧಾನ ಕಚೇರಿಗೆ ಭೇಟಿ ನೀಡಿಲಿದ್ದು, ಮಂಗಳವಾರ ಪಠಾಣ್ ಕೋಟ್ ಗೆ ತೆರಳಲಿದೆ ಎಂದು ಎಎನ್ಐ ವರದಿ ಮಾಡಿದೆ.

ನೇಪಾಳದಲ್ಲಿ ನಡೆದ ಸಾರ್ಕ್ ಸಭೆಯಲ್ಲಿ ಪಾಕಿಸ್ತಾನ ವಿದೇಶಾಂಗ ಇಲಾಖೆ ಸಲಹೆಗಾರ ಸರ್ತಾಜ್ ಅಜೀಜ್ - ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್  ಭೇಟಿ ನಂತರ ಪಾಕ್ ತನಿಖಾ ತಂಡಕ್ಕೆ ವೀಸಾ ನೀಡಲಾಗಿತ್ತು.

ಜ.2 ರಂದು ಪಂಜಾಬ್ ನ ಪಠಾಣ್ ಕೋಟ್ ವಾಯು ನೆಲೆಯಲ್ಲಿ  ದಾಳಿ ನಡೆಸಿದ್ದ ಭಯೋತ್ಪಾದಕರಿಗೂ ಪಾಕಿಸ್ತಾನದ ಜೈಶ್-ಇ- ಮೊಹಮ್ಮದ್ ಉಗ್ರ ಸಂಘಟನೆಗೂ ನಂಟಿದೆ ಎಂಬ ಆರೋಪ ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ಪಾಕಿಸ್ತಾನ ಸರ್ಕಾರ ರಚನೆ ಮಾಡಿರುವ ಜಂಟಿ ತನಿಖಾ ತಂಡ ತನಿಖೆ ನಡೆಸಲು ಭಾರತಕ್ಕೆ ಆಗಮಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com