
ಲಾಹೋರ್: ಪಾಕಿಸ್ತಾನದಲ್ಲಿ 501 ಜನ ಧಾರ್ಮಿಕ ಮುಖಂಡರ ವಿರುದ್ಧ ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ. ಸಮಾಜದಲ್ಲಿ ಉಗ್ರವಾದ ಹಾಗೂ ಹಿಂಸಾಚಾರ ಸೃಷ್ಟಿಸುತ್ತಿರುವ ಆರೋಪದಡಿ ಪಾಕಿಸ್ತಾನದ ಭಯೋತ್ಪಾದನ ನಿಗ್ರಹ ಕಾಯ್ದೆ(ಎಟಿಎ)ಪ್ರಕಾರ ಪ್ರಕರಣಗಳು ದಾಖಲಾಗಿವೆ.
ಡಾನ್ ಪತ್ರಿಕೆ ವರದಿಯ ಪ್ರಕಾರ, ರಾವಲ್ಪಿಂಡಿಯಲ್ಲಿ ಭಾನುವಾರ ನಡೆದ ಧಾರ್ಮಿಕ ಸಂಘಟನೆಗಳ ಕಾರ್ಯಕರ್ತರ ನಡುವಿನ ಘಟನೆಗೆ ಸಂಬಂಧಿಸಿದಂತೆ ದಾಖಲಾಗಿರುವ ಪ್ರಕರಣಗಳ ಪೈಕಿ ಈಗಾಗಲೇ ಕೆಲವರನ್ನು ಪೊಲೀಸರು ಬಂಧಿಸಿದ್ದಾರೆ. ಕಾರ್ಯಕರ್ತರ ಬಂಧನದಿಂದ ಯಾವುದೇ ಪ್ರಯೋಜನವಾಗದ ಕಾರಣ ಬಂಧಿತರ ವಿರುದ್ಧ ಪ್ರಕರಣ ದಾಖಲಿಸಲು ನಿರ್ಧರಿಸಲಾಗಿದೆ. ರಾವಲ್ಪಿಂಡಿಯ ವಿವಿಧ ಪೊಲೀಸ್ ಠಾಣೆಗಳಲ್ಲಿ ಧಾರ್ಮಿಕ ಕಾರ್ಯಕರ್ತರನ್ನು ಬಂಧಿಸಲಾಗಿದೆ.
Advertisement