ಮುಂಬೈ ದಾಳಿ: ಉಗ್ರ ಲಖ್ವಿ, ಇತರರ ವಿರುದ್ಧ ಪ್ರತ್ಯೇಕ ಕೊಲೆ ಪ್ರಕರಣ ದಾಖಲಿಸಿ; ಪಾಕ್ ಕೋರ್ಟ್

2008ರ ಮುಂಬೈ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಲಷ್ಕರ್ ಇ ತೋಯಿಬಾ ಉಗ್ರ ಸಂಘಟನೆಯ ಕಮಾಂಡರ್ ಝಕಿ ಉರ್ ರೆಹಮಾನ್...
ಲಖ್ವಿ- ಮುಂಬೈ ದಾಳಿಯ ಚಿತ್ರ
ಲಖ್ವಿ- ಮುಂಬೈ ದಾಳಿಯ ಚಿತ್ರ
ಲಾಹೋರ್: 2008ರ ಮುಂಬೈ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಲಷ್ಕರ್ ಇ ತೋಯಿಬಾ ಉಗ್ರ ಸಂಘಟನೆಯ ಕಮಾಂಡರ್ ಝಕಿ ಉರ್ ರೆಹಮಾನ್ ಲಖ್ವಿ ಹಾಗೂ ಇತರೆ ಆರು ಆರೋಪಿಗಳ ವಿರುದ್ಧು 166 ಜನರ ಹತ್ಯೆಗೆ ಸಂಚು ರೂಪಿಸಿದ ಆರೋಪದಡಿ ಪ್ರಕರಣ ದಾಖಲಿಸುವಂತೆ ಪಾಕಿಸ್ತಾನ ಕೋರ್ಟ್ ಶುಕ್ರವಾರ ಆದೇಶಿಸಿದೆ.
ಏಳು ಆರೋಪಿಗಳ ವಿರುದ್ಧ ವೈಯಕ್ತಿಕವಾಗಿ ಮುಂಬೈ ದಾಳಿಯಲ್ಲಿ ಮೃತಪಟ್ಟ ಪ್ರತಿಯೊಬ್ಬರ ಕೊಲೆಗೂ ಪ್ರಚೋದನೆ ನೀಡಿದ ಆರೋಪ ಹೊರಿಸುವಂತೆ ಪಾಕಿಸ್ತಾನ ಭಯೋತ್ಪಾದನೆ ನಿಗ್ರಹ ಕೋರ್ಟ್ ಆದೇಶಿಸಿರುವುದಾಗಿ ನ್ಯಾಯಾಲಯದ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಮುಂಬೈ ದಾಳಿಗೆ ಸಂಚು ರೂಪಿಸಿದ ಆರೋಪ ಎದುರಿಸುತ್ತಿರುವ ಏಳು ಶಂಕಿತ ಉಗ್ರರ ವಿರುದ್ಧದ ಆರೋಪಗಳಲ್ಲಿ ತಿದ್ದುಪಡಿ ಮಾಡಬೇಕು ಎಂದು ಕೋರಿ ಎರಡು ತಿಂಗಳ ಹಿಂದೆ ಪ್ರಾಸಿಕ್ಯೂಷನ್ ಪರ ವಕೀಲರು ಮನವಿ ಮಾಡಿದ್ದರು. ವಿಚಾರಣೆ ನಡೆಸಿದ್ದ ಉಗ್ರ ನಿಗ್ರಹ ಕೋರ್ಟ್ ತೀರ್ಪುನ್ನು ಕಾಯ್ದಿರಿಸಿತ್ತು.
ಇಂದು ತೀರ್ಪು ಪ್ರಕಟಿಸಿದ ಪಾಕ್ ಕೋರ್ಟ್, ಶಂಕಿತ ಉಗ್ರರ ವಿರುದ್ಧದ ಆರೋಪವನ್ನು ಕೈಬಿಡಲು ನಿರಾಕರಿಸಿದೆ.
2008, ನವೆಂಬರ್ ನಲ್ಲಿ ಪಾಕಿಸ್ತಾನದ 10 ಉಗ್ರರು ಮುಂಬೈ ಮೇಲೆ ನಡೆಸಿದ ದಾಳಿಯಲ್ಲಿ ಆರು ಅಮೆರಿಕ ಪ್ರಜೆಗಳು ಸೇರಿದಂತೆ 166 ಮಂದಿ ಮೃತಪಟ್ಟಿದ್ದರು. ಅಲ್ಲದೆ 300ಕ್ಕೂ ಮಂದಿ ತೀವ್ರವಾಗಿ ಗಾಯಗೊಂಡಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com