ಹಿರೋಶಿಮಾ ಮೇಲೆ ಅಣು ಬಾಂಬ್ ಪ್ರಯೋಗ ಘಟನೆಗೆ ಕ್ಷಮೆ ಕೋರುವುದಿಲ್ಲ: ಒಬಾಮ

ಅಮೆರಿಕ ಹಿರೋಶಿಮಾ ಮೇಲೆ ಅಣು ಬಾಂಬ್ ಹಾಕಿದ್ದ ಘಟನೆಗೆ ಕ್ಷಮೆ ಕೋರುವುದಿಲ್ಲ ಎಂದು ಬರಾಕ್ ಒಬಾಮ ಹೇಳಿದ್ದಾರೆ.
ಬರಾಕ್ ಒಬಾಮ
ಬರಾಕ್ ಒಬಾಮ

ಟೊಕಿಯೋ: ಜಪಾನ್ ನ ಹಿರೋಶಿಮಾಗೆ ನೀಡಲಿರುವ ಅಮೆರಿಕ ಅಧ್ಯಕ್ಷ ಬರಾಕ್ ಒಬಾಮ, ಅಮೆರಿಕ ಹಿರೋಶಿಮಾ ಮೇಲೆ ಅಣು ಬಾಂಬ್ ಹಾಕಿದ್ದ ಘಟನೆಗೆ ಕ್ಷಮೆ ಕೋರುವುದಿಲ್ಲ ಎಂದು ಹೇಳಿದ್ದಾರೆ.
ಪ್ರಸಾರ ವಾಹಿನಿಯೊಂದಕ್ಕೆ ಸಂದರ್ಶನ ನೀಡಿರುವ ಬರಾಕ್ ಒಬಾಮ, ಅಮೆರಿಕ ಹಿರೋಶಿಮಾ ಮೇಲೆ ಅಣು ಬಾಂಬ್ ಪ್ರಯೋಗಿಸಿದ್ದಕ್ಕೆ ಕ್ಷಮೆ ಕೋರುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಭೇಟಿಯ ವೇಳೆಯಲ್ಲಿ ಹಿರೋಶಿಮಾ ಘಟನೆ ಬಗ್ಗೆ ಕ್ಷಮೆ ಕೇಳುತ್ತಿರಾ ಎಂಬ ಪ್ರಶ್ನೆಗೆ ಉತ್ತರಿಸಿರುವ ಅಮೆರಿಕ ಅಧ್ಯಕ್ಷ ಬರಾಕ್ ಒಬಾಮ, ಸ್ಪಷ್ಟವಾಗಿ ನಿರಾಕರಿಸಿದ್ದು, ಯುದ್ಧದ ನಡುವೆ ನಾಯಕರು ಎಲ್ಲಾ ನಿರ್ಧಾರಗಳನ್ನು ಕೈಗೊಳ್ಳುತ್ತಾರೆ. ಆದ್ದರಿಂದ ಕ್ಷಮೆ ಕೋರುವುದಿಲ್ಲ ಎಂದು ಹೇಳಿದ್ದಾರೆ.
ಬರಾಕ್ ಒಬಾಮ, ಎರಡನೇ ಮಹಾಯುದ್ಧದ ಬಳಿಕ ಜಪಾನ್ ನಗರಕ್ಕೆ ಭೇಟಿ ನೀಡಲಿರುವ ಮೊದಲ ಅಮೆರಿಕ ಅಧ್ಯಕ್ಷರಾಗಿದ್ದು, ಮೇ.27 ರಂದು ಜಪಾನ್ ಪ್ರಧಾನಿ ಶಿಂಜೋ ಅಬೆ ಅವರೊಂದಿಗೆ ಹಿರೋಶಿಮಾಕ್ಕೂ ಭೇಟಿ ನೀಡಲಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com