ವಿದೇಶ

ನವಾಜ್ ಷರೀಫ್ ಗೆ ಹೃದಯ ಶಸ್ತ್ರಚಿಕಿತ್ಸೆ: ಶುಭ ಕೋರಿದ ಪ್ರಧಾನಿ ಮೋದಿ

ಪಾಕಿಸ್ತಾನ ಪ್ರಧಾನಿ ನವಾಜ್ ತೆರೆದ ಹೃದಯ ಶಸ್ತ್ರಚಿಕಿತ್ಸೆಗೆ ಒಳಗಾಗಲಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ನವಾಜ್ ಷರೀಫ್ ಗೆ ಶುಭಕೋರಿದ್ದಾರೆ.

ನವಾಜ್ ಷರೀಫ್ ಗೆ ಹೃದಯ ಶಸ್ತ್ರಚಿಕಿತ್ಸೆ: ಶುಭ ಕೋರಿದ ಪ್ರಧಾನಿ ಮೋದಿ
ಹೃದಯಶಸ್ತ್ರಚಿಕಿತ್ಸೆ ಪಡೆಯಲಿರುವ ನವಾಜ್ ಷರೀಫ್ ಗೆ ಶುಭ ಹಾರೈಸಿದ ಪ್ರಧಾನಿ ನರೇಂದ್ರ ಮೋದಿ
Published On :

ನವದೆಹಲಿ: ಪಾಕಿಸ್ತಾನ ಪ್ರಧಾನಿ ನವಾಜ್ ಷರೀಫ್ ತೆರೆದ ಹೃದಯ ಶಸ್ತ್ರಚಿಕಿತ್ಸೆಗೆ ಒಳಗಾಗಲಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ನವಾಜ್ ಷರೀಫ್ ಗೆ ಶುಭಕೋರಿದ್ದಾರೆ.
ನವಾಜ್ ಷರೀಫ್ ಶಸ್ತ್ರಚಿಕಿತ್ಸೆ ಪಡೆಯಲಿದ್ದು, ಅವರಿಗೆ ಶುಭಕೋರುತ್ತೇನೆ ಎಂದು ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿದ್ದಾರೆ. ಮೇ.31 ರಂದು ನವಾಜ್ ಷರೀಫ್ ಅವರಿಗೆ ಬ್ರಿಟನ್ ನಲ್ಲಿ ಹೃದಯ ಶಸ್ತ್ರಚಿಕಿತ್ಸೆ ನಡೆಯಲಿದ್ದು ಒಂದು ವಾರಗಳ ಕಾಲ ನವಾಜ್ ಷರೀಫ್ ಬ್ರಿಟನ್ ನ ಆಸ್ಪತ್ರೆಯಲ್ಲಿ ಇರಲಿದ್ದಾರೆ ಎಂದು ಪಾಕಿಸ್ತಾನ ರಕ್ಷಣಾ ಸಚಿವ ಖವಾಜಾ ಅಸೀಫ್ ಹೇಳಿದ್ದಾರೆ. 
ವೈದ್ಯರು ತೆರೆದ ಹೃದಯ ಶಸ್ತ್ರಚಿಕಿತ್ಸೆ ಪಡೆಯುವುವಂತೆ ನವಾಜ್ ಷರೀಫ್ ಗೆ ಸಲಹೆ ನೀಡಿದ್ದಾರೆ ಎಂದು ನವಾಜ್ ಷರೀಫ್ ಅವರ ಪುತ್ರಿ ಮರ್ಯಾಂ ನವಾಜ್ ಟ್ವಿಟರ್ ನಲ್ಲಿ ಮಾಹಿತಿ ನೀಡಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.