

ಢಾಕಾ: ಬಾಂಗ್ಲಾದೇಶದಲ್ಲಿ ಮತ್ತೆ ಹಿಂದೂಗಳ ಮೇಲೆ ದಾಳಿ ನಡೆಸಲಾಗಿದ್ದು, ಕೆಲ ದುಷ್ಕರ್ಮಿಗಳು ಹಿಂದೂಗಳಿಗೆ ಸೇರಿದ ಮನೆಗಳು ಹಾಗೂ ದೇಗುಲಗಳಿಗೆ ಬೆಂಕಿ ಹಚ್ಚಿರುವುದಾಗಿ ಶನಿವಾರ ತಿಳಿದುಬಂದಿದೆ.
ಕೆಲ ದಿನಗಳ ಹಿಂದಷ್ಟೇ ಬ್ರಹ್ಮನ್ ಬರ್ಹಿಯಾ ಜಿಲ್ಲೆಯ ನಾಸಿರ್ ನಗರದಲ್ಲಿ ಸುಮಾರು ನೂರಕ್ಕೂ ಹೆಚ್ಚು ಹಿಂದೂ ಧರ್ಮಿಯರ ಮನೆಗಳ ಮೇಲೆ ದುಷ್ಕರ್ಮಿಗಳು ದಾಳಿ ಮಾಡಿದ್ದರು. ಹಿಂದೂಗಳಿಗೆ ಸೇರಿದ ದೇಗುಲಗಳನ್ನು ಧ್ವಂಸ ಮಾಡಿದ್ದರು. ಇದೀಗ ಮತ್ತೆ ಹಿಂದೂಗಳ ಮೇಲೆ ದಾಳಿ ನಡೆಸಲಾಗಿದ್ದು, 6 ಮಂದಿ ಹಿಂದೂ ಧರ್ಮಿಯರ ಮನೆಗಳಿಗೆ ಬೆಂಕಿ ಹಚ್ಚಲಾಗಿದೆ ಎಂದು ಮೂಲಗಳು ತಿಳಿಸಿವೆ.
ಎರಡು ಹಿಂದೂ ದೇಗುಲಗಳ ಮೇಲೆ ದುಷ್ಕರ್ಮಿಗಳು ದಾಳಿ ಮಾಡಿದ್ದು, ದೇಗುಲಗಳಿಗೆ ಬೆಂಕಿ ಹಚ್ಚಿ ಸ್ಥಳದಿಂದ ಪರಾರಿಯಾಗಿದ್ದಾರೆಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಹಿಂದೂಗಳ ಮೇಲೆ ದಾಳಿ ನಡೆಸುತ್ತಿರುವ ಹಿನ್ನೆಲೆಯಲ್ಲಿ ಈಗಾಗಲೇ ಹೆದರಿರುವ ಜನರು ತಮ್ಮ ತಮ್ಮ ಮನೆಗಳನ್ನು ತೊರೆದು ಬೇರೆಡೆ ಸ್ಥಳಾಂತರಗೊಳ್ಳುತ್ತಿದ್ದಾರೆಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಅಕ್ಟೋಬರ್ 30 ಹಿಂದೂಗಳ ಮೇಲೆ ದಾಳಿ ನಡೆದ ಪ್ರಕರಣ ಸಂಬಂಧ ಈ ವರೆಗೂ 33 ಮಂದಿಯನ್ನು ಅಲ್ಲಿನ ಪೊಲೀಸರು ಬಂಧನಕ್ಕೊಳಪಡಿಸಿದ್ದು, ತನಿಖೆ ನಡೆಸುತ್ತಿದ್ದಾರೆಂದು ತಿಳಿದುಬಂದಿದೆ.