ವಿದೇಶ

ಐತಿಹಾಸಿಕ ನಾಗರಿಕ ಪರಮಾಣು ಒಪ್ಪಂದಕ್ಕೆ ಭಾರತ-ಜಪಾನ್ ಸಹಿ

ಆರು ವರ್ಷಗಳ ಮಾತುಕತೆ ಬಳಿಕ ಮಹತ್ವದ ನಾಗರಿಕ ಪರಮಾಣು ಒಪ್ಪಂದಕ್ಕೆ ಭಾರತ-ಜಪಾನ್ ಸಹಿ ಹಾಕಿವೆ...

ಐತಿಹಾಸಿಕ ನಾಗರಿಕ ಪರಮಾಣು ಒಪ್ಪಂದಕ್ಕೆ ಭಾರತ-ಜಪಾನ್ ಸಹಿ
ನರೇಂದ್ರ ಮೋದಿ, ಶಿಂಜೊ ಅಬೆ
Published On :
ಟೋಕಿಯೋ: ಆರು ವರ್ಷಗಳ ಮಾತುಕತೆ ಬಳಿಕ ಮಹತ್ವದ ನಾಗರಿಕ ಪರಮಾಣು ಒಪ್ಪಂದಕ್ಕೆ ಭಾರತ-ಜಪಾನ್ ಸಹಿ ಹಾಕಿವೆ. 
ಮೂರು ದಿನಗಳ ಜಪಾನ್ ಪ್ರವಾಸದಲ್ಲಿರುವ ಪ್ರಧಾನಿ ಮೋದಿ ಹಾಗೂ ಜಪಾನ್ ಪ್ರಧಾನಿ ಶಿಂಜೊ ಅಬೆ ಅವರು ಟೋಕಿಯೋದಲ್ಲಿ ಈ ಮಹತ್ವದ ಒಪ್ಪಂದಕ್ಕೆ ಸಹಿ ಹಾಕಿದ್ದಾರೆ. ಒಪ್ಪಂದದ ಬಳಿಕ ಮಾತನಾಡಿದ ಪ್ರಧಾನಿ ಮೋದಿ ಅವರು, ನಾಗರೀಕ ಬಳಕೆಗಾಗಿ ಪರಸ್ಪರ ಸಹಕಾರಕ್ಕೆ ಭಾರತ-ಜಪಾನ್ ತೀರ್ಮಾನಿಸಲಾಗಿದ್ದು, ಇದೊಂದು ಐತಿಹಾಸಿಕ ನಿರ್ಧಾರ ಎಂದು ಬಣ್ಣಿಸಿದ್ದಾರೆ.
ಕಳೆದ ಡಿಸೆಂಬರ್ ನಲ್ಲಿ ಜಪಾನ್ ಪ್ರಧಾನಿ ಶಿಂಜೊ ಅಬೆ ಅವರು ಭಾರತಕ್ಕೆ ಬಂದಿದ್ದಾಗ ನಾಗರಿಕ ಪರಮಾಣು ಒಪ್ಪಂದದ ಬಗ್ಗೆ ಮಾತುಕತೆ ನಡೆದಿದ್ದು ಇದೀಗ ಫಲಪ್ರದವಾಗಿದೆ ಎಂದರು. ಇನ್ನು ಜಗತ್ತನ್ನೇ ಪೀಡಿಸುತ್ತಿರುವ ಭಯೋತ್ಪಾದನೆ ವಿರುದ್ಧ ಉಭಯ ದೇಶಗಳು ಜಂಟಿಯಾಗಿ ಹೋರಾಟ ನಡೆಸುತ್ತೇವೆ ಎಂದರು. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.