ಜರ್ಮನ್ ರಾಯಭಾರ ಕಚೇರಿ ಮೇಲೆ ತಾಲಿಬಾನ್ ದಾಳಿ; ಮೃತರ ಸಂಖ್ಯೆ 6ಕ್ಕೆ ಏರಿಕೆ

ಅಫ್ಘಾನಿಸ್ತಾನ ರಾಜಧಾನಿ ಕಾಬೂಲ್ ನಲ್ಲಿರುವ ಜರ್ಮನ್ ರಾಯಭಾರ ಕಚೇರಿ ಮೇಲೆ ತಾಲಿಬಾನ್ ಉಗ್ರರು ನಡೆಸಿದ ಆತ್ಮಾಹುತಿ ಬಾಂಬ್...
ಜರ್ಮನ್ ರಾಯಭಾರ ಕಚೇರಿ ಮೇಲೆ ದಾಳಿ
ಜರ್ಮನ್ ರಾಯಭಾರ ಕಚೇರಿ ಮೇಲೆ ದಾಳಿ
ಕಾಬೂಲ್: ಅಫ್ಘಾನಿಸ್ತಾನ ರಾಜಧಾನಿ ಕಾಬೂಲ್ ನಲ್ಲಿರುವ ಜರ್ಮನ್ ರಾಯಭಾರ ಕಚೇರಿ ಮೇಲೆ ತಾಲಿಬಾನ್ ಉಗ್ರರು ನಡೆಸಿದ ಆತ್ಮಾಹುತಿ ಬಾಂಬ್ ದಾಳಿಯಲ್ಲಿ ಮೃತರ ಸಂಖ್ಯೆ 6ಕ್ಕೆ ಏರಿಕೆಯಾಗಿದೆ. 
ಕಾಬೂಲ್ ನ ಮಝರ್‌-ಇ-ಷರೀಫ್ ನಗರದಲ್ಲಿರುವ ಜರ್ಮನ್‌ ರಾಯಭಾರ ಕಚೇರಿಯ ಕಾಂಪೌಂಡ್ ಗೆ ತಾಲಿಬಾನ್ ಉಗ್ರನೋರ್ವ ಗುರುವಾರ ತಡರಾತ್ರಿ ಅಪಾರ ಪ್ರಮಾಣದ ಸ್ಫೋಟಕಗಳನ್ನು ತುಂಬಿಸಿದ್ದ ಕಾರನ್ನು ಕಚೇರಿಗೆ ನುಗ್ಗಿಸಿದ್ದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದರು. ಗಂಭೀರವಾಗಿ ಗಾಯಗೊಂಡಿದ್ದವರ ಪೈಕಿ ನಾಲ್ವರು ಇಂದು ಮೃತಪಟ್ಟಿದ್ದು ಸಾವಿನ ಸಂಖ್ಯೆ 6ಕ್ಕೆ ಏರಿಕೆಯಾಗಿದೆ. ಇನ್ನು 100 ಅಧಿಕ ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 
ಈ ಹಿಂದೆ ಕುಂಡೂಜ್‌ನಲ್ಲಿ ಅಮೆರಿಕ ನೇತೃತ್ವದ ಮಿತ್ರಪಡೆಗಳು ವಾಯುದಾಳಿ ನಡೆಸಿ ಹಲವು ಉಗ್ರರನ್ನು ಕೊಂದು ಹಾಕಿತ್ತು. ಈ ವೇಳೆ ಸುಮಾರು 32 ನಾಗರಿಕರು ಕೂಡ ಸಾವಿಗೀಡಾಗಿದ್ದರು. ಇದಕ್ಕೆ ಪ್ರತಿಕಾರವಾಗಿ ಈ ದಾಳಿ ನಡೆಸಿದ್ದೇವೆ ಎಂದು ತಾಲಿಬಾನ್‌ ಹೆಳಿಕೊಂಡಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com