ಪುಟಿನ್ ಜೊತೆ ಟ್ರಂಪ್ ದೂರವಾಣಿ ಮಾತುಕತೆ: ಭಯೋತ್ಪಾದನೆ, ದ್ವಿಪಕ್ಷೀಯ ಬಾಂಧವ್ಯ ವೃದ್ಧಿ ಬಗ್ಗೆ ಚರ್ಚೆ

ಅಮೆರಿಕ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ನಂತರ ಟ್ರಂಪ್ ಮೊದಲ ಬಾರಿಗೆ ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಅವರೊಂದಿಗೆ ದೂರವಾಣಿ ಸಂಭಾಷಣೆ ನಡೆಸಿದ್ದು, ಶೀಘ್ರವೇ ಪರಸ್ಪರ ಭೇಟಿಯನ್ನು ನಿಗದಿಪಡಿಸಲು...
ಡೊನಾಲ್ಡ್ ಟ್ರಂಪ್- ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್
ಡೊನಾಲ್ಡ್ ಟ್ರಂಪ್- ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್
ಮಾಸ್ಕೋ: ಅಮೆರಿಕ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ನಂತರ ಡೊನಾಲ್ಡ್ ಟ್ರಂಪ್ ಮೊದಲ ಬಾರಿಗೆ ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಅವರೊಂದಿಗೆ ದೂರವಾಣಿ ಸಂಭಾಷಣೆ ನಡೆಸಿದ್ದು, ಶೀಘ್ರವೇ ಪರಸ್ಪರ ಭೇಟಿಯನ್ನು ನಿಗದಿಪಡಿಸಲು  ಅಧಿಕಾರಿಗಳಿಗೆ ಸೂಚಿಸಲು ಒಪ್ಪಿಗೆ ಸೂಚಿಸಿದ್ದಾರೆ. 
ಡೊನಾಲ್ಡ್ ಟ್ರಂಪ್- ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ನಡುವಿನ ದೂರವಾಣಿ ಸಂಭಾಷಣೆ ಬಗ್ಗೆ ಅಧಿಕೃತ ಹೇಳಿಕೆ ಬಿಡುಗಡೆ ಮಾಡಿರುವ ರಷ್ಯಾ ಸರ್ಕಾರ ಉಭಯ ನಾಯಕರು ಶೀಘ್ರವೇ ಭೇಟಿ ಮಾಡಲು ತೀರ್ಮಾನಿಸಿದ್ದಾರೆ ಎಂದು ತಿಳಿಸಿದೆ. ಉಭಯ ನಾಯಕರು ಅಮೆರಿಕ-ರಷ್ಯಾ ದ್ವಿಪಕ್ಷೀಯ ಸಂಬಂಧದ ಬಗ್ಗೆ ಪ್ರಧಾನವಾಗಿ ಮಾತನಾಡಿದ್ದಾರೆ. 
ಅಮೆರಿಕ-ರಷ್ಯಾ ನಡುವೆ ಸಂಪೂರ್ಣ ಅತೃಪ್ತಿಕರ ದ್ವಿಪಕ್ಷೀಯ ಸಂಬಂಧ ಇರುವುದನ್ನು ಪುಟಿನ್- ಟ್ರಂಪ್ ಇಬ್ಬರೂ ಒಪ್ಪಿಕೊಂಡಿದ್ದು ದ್ವಿಪಕ್ಷೀಯ ಬಾಂಧವ್ಯವನ್ನು ಸಹಜಸ್ಥಿತಿಗೆ ತರುವ ನಿಟ್ಟಿನಲ್ಲಿ ಕಾರ್ಯನಿರತರಾಗಲು ಇಬ್ಬರೂ ಒಪ್ಪಿಗೆ ಸೂಚಿಸಿದ್ದಾರೆ ಎಂದು ರಷ್ಯಾ ಸರ್ಕಾರದ ಅಧಿಕೃತ ಪ್ರಕಟಣೆ ತಿಳಿಸಿದೆ. 
ಅಂತಾರಾಷ್ಟ್ರೀಯ ಮಟ್ಟದಲ್ಲಿ ಸಾಮಾನ ವೈರಿಯಾಗಿರುವ ಭಯೋತ್ಪಾದನೆ ವಿರುದ್ಧದ ಹೋರಾಟದ ಬಗ್ಗೆ ಟ್ರಂಪ್- ಪುಟಿನ್ ಚರ್ಚೆ ನಡೆಸಿದ್ದು, ಸಿರಿಯಾ ಅಸ್ಥಿರತೆಯನ್ನು ಅಂತ್ಯಗೊಳಿಸುವ ಬಗ್ಗೆಯೂ ಅಮೆರಿಕ ನಿಯೋಜಿತ ಅಧ್ಯಕ್ಷ- ರಷ್ಯಾ ಅಧ್ಯಕ್ಷರು ಮಾತನಾಡಿದ್ದಾರೆ ಎಂದು ರಷ್ಯಾ ಸರ್ಕಾರ ಸ್ಪಷ್ಟಪಡಿಸಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com