"ಅಮೆರಿಕದ ನಿಯೋಜಿತ ಅಧ್ಯಕ್ಷರೊಂದಿಗೆ ಪಾಕ್ ಪ್ರಧಾನಿ ನವಾಜ್ ಷರೀಫ್ ಕರೆ ಮಾಡಿ ಮಾತನಾಡಿದ್ದು ಅಧ್ಯಕ್ಷೀಯ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದಕ್ಕೆ ಅಭಿನಂದನೆ ಸಲ್ಲಿಸಿದ್ದಾರೆ. ಪಾಕ್ ಪ್ರಧಾನಿ ನವಾಜ್ ಷರೀಫ್ ಅವರೊಂದಿಗೆ ಮಾತನಾಡಿರುವ ಡೊನಾಲ್ಡ್ ಟ್ರಂಪ್ ನವಾಜ್ ಷರೀಫ್ ಅವರನ್ನು ಅದ್ಭುತ ವ್ಯಕ್ತಿ ಎಂದು ಹೊಗಳಿದ್ದು, ನಿಮ್ಮೊಂದಿಗೆ ಮಾತನಾಡುತ್ತಿರುವುದು ಹಳೆಯ ಪರಿಚಯದ ವ್ಯಕ್ತಿಯೊಂದಿಗೆ ಮಾತನಾಡುವಂತೆ ಭಾಸವಾಗುತ್ತಿದೆ ಎಂದು ಟ್ರಂಪ್ ನವಾಜ್ ಷರೀಫ್ ಗೆ ಹೇಳಿದ್ದಾಗಿ ಪಾಕಿಸ್ತಾನದ ಪಿಐಬಿ ತಿಳಿಸಿದೆ.