ವಿದೇಶ

12 ಸಾವಿರ ಪೊಲೀಸರನ್ನು ಅಮಾನತು ಮಾಡಿದ ಟರ್ಕಿ ಸರ್ಕಾರ

12 ಸಾವಿರ ಪೊಲೀಸರನ್ನು ಅಮಾನತು ಮಾಡಿದ ಟರ್ಕಿ ಸರ್ಕಾರ
ಟರ್ಕಿ ಪೊಲೀಸ್
Published On :

ಟರ್ಕಿ: ಕಳೆದ ಜುಲೈನಲ್ಲಿ ಸರ್ಕಾರದ ವಿರುದ್ಧ ಸೇನಾ ದಂಗೆಯ ಮಾಸ್ಟರ್ ಮೈಂಡ್ ಮುಸ್ಲಿಂ ಧಾರ್ಮಿಕ ಮುಖಂಡ ಫೆತುಲ್ಲಾ ಗುಲೇನ್ ಅವರೊಂದಿಗೆ ಸಂಬಂಧ ಹೊಂದಿದ್ದಾರೆ ಎಂಬ ಕಾರಣಕ್ಕೆ ಟರ್ಕಿ ಸರ್ಕಾರ 12 ಸಾವಿರ ಪೊಲೀಸ್ ಅಧಿಕಾರಿಗಳನ್ನು ಅಮಾನತುಗೊಳಿಸಿದೆ.

ದಂಗೆಯ ತನಿಖೆಯಲ್ಲಿ ಭಾಗಿಯಾಗಿದ್ದ 12,801 ಪೊಲೀಸರನ್ನು ಅಮಾನತು ಮಾಡಿದ್ದು, ಇದರಲ್ಲಿ 2,523 ಮಂದಿ ಹಿರಿಯ ಪೊಲೀಸ್ ಅಧಿಕಾರಿಗಳು ಸೇರಿದ್ದಾರೆ ಎಂದು ಪ್ರಕಟಣೆಯಲ್ಲಿ ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ.

ಜುಲೈ 16ರಂದು ಟರ್ಕಿಯಲ್ಲಿ ಸರ್ಕಾರದ ವಿರುದ್ಧ ಬಂಡೆದ್ದ ಸೈನಿಕರು ತಡ ರಾತ್ರಿ ಕ್ಷಿಪ್ರ ಕ್ರಾಂತಿಗೆ ಯತ್ನಿಸಿದ್ದು ಇದನ್ನು ಖಂಡಿಸಿ ಇಡೀ ಟರ್ಕಿಗೆ ಟರ್ಕಿ ಬೀದಿಗಿಳಿದು ಸೈನಿಕರ ಯತ್ನವನ್ನು ವಿಫಲಗೊಳಿಸುವಲ್ಲಿ ಯಶಸ್ವಿಯಾಗಿದ್ದರು. ಹಿಂಸಾತ್ಮಕ ಹೋರಾಟದಲ್ಲಿ 160ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದು, 1500ಕ್ಕೂ ಅಧಿಕ ಮಂದಿಗೆ ಗಾಯಗಳಾಗಿದ್ದವು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.